ಗುರುವಾರ , ಡಿಸೆಂಬರ್ 3, 2020
20 °C

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ದಾರಿಹೋಕನಿಗೆ ಡಿಕ್ಕಿ: ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ತಾಲ್ಲೂಕಿನ ಮಲಪನಗುಡಿ ಬಳಿ ಶುಕ್ರವಾರ ದ್ವಿಚಕ್ರ ವಾಹನ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ದಾರಿಹೋಕನಿಗೆ ಡಿಕ್ಕಿ ಹೊಡೆದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಗಾಳೆಮ್ಮನಗುಡಿಯ ರಾಮಪ್ಪ (60) ಮೃತರು.

‘ರಾಮಪ್ಪ ಅವರು ಶುಕ್ರವಾರ ಮಧ್ಯಾಹ್ನ ಪಡಿತರ ತೆಗೆದುಕೊಂಡು ಹೋಗಲು ಮಲಪನಗುಡಿಗೆ ಬಂದಿದ್ದರು. ರಸ್ತೆ ದಾಟಿಕೊಂಡು ಹೋಗುವಾಗ ಈ ವೇಳೆ ಕಮಲಾಪುರದಿಂದ ನಗರದ ಕಡೆಗೆ ದ್ವಿಚಕ್ರ ವಾಹನದ ಮೇಲೆ ಇಬ್ಬರು ಯುವಕರು ಬರುತ್ತಿದ್ದರು. ಅವರನ್ನು ತಡೆಯಲೆತ್ನಿಸಿದಾಗ ತಪ್ಪಿಸಿಕೊಂಡು ಹೋಗುವ ಭರದಲ್ಲಿ ನಿಯಂತ್ರಣ ತ‍ಪ್ಪಿ ರಾಮಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಬೈಕ್‌ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಬಳ್ಳಾರಿಯ ವಿಮ್ಸ್‌ಗೆ ಕಳುಹಿಸಿಕೊಡಲಾಗಿದೆ. ಯುವಕರು ಇಲ್ಲಿನ ಪಟೇಲ್‌ ನಗರದ ನಿವಾಸಿ ಎಂದು ಗೊತ್ತಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು