ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನರ ಸಮಸ್ಯೆ ಆಧರಿಸಿ ಪಕ್ಷದ ಕಾರ್ಯಸೂಚಿ’

ಶಾಂತಿನಗರ: ಎಎಪಿ ಪ್ರಣಾಳಿಕೆ ಬಿಡುಗಡೆ
Last Updated 5 ಮೇ 2018, 19:38 IST
ಅಕ್ಷರ ಗಾತ್ರ

ಬೆಂಗಳೂರು: ‘ಸುಳ್ಳು ಆಶ್ವಾಸನೆಗಳನ್ನು ಕೊಡುವ ಉದ್ದೇಶ ನಮ್ಮ ಪಕ್ಷಕ್ಕೆ ಇಲ್ಲ. ಆದ್ದರಿಂದ ನಾವು ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿ ಪ್ರಣಾಳಿಕೆ ಸಿದ್ಧಪಡಿಸಿದ್ದೇವೆ’ ಎಂದು ಶಾಂತಿನಗರ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಾರ್ಟಿಯ ಅಭ್ಯರ್ಥಿ ರೇಣುಕಾ ವಿಶ್ವನಾಥನ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಸ್ಥಳೀಯರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಪಕ್ಷವು ಪ್ರತಿಯೊಂದು ಕ್ಷೇತ್ರಕ್ಕೂ ಪ್ರತ್ಯೇಕ ಪ್ರಣಾಳಿಕೆಯನ್ನು ರೂಪಿಸಿದೆ. ಇದರಲ್ಲಿ ಪ್ರತಿ ವಾರ್ಡ್‌ಗಳಿಗೂ ವಿಭಿನ್ನವಾದ ಯೋಜನೆಗಳನ್ನು ಪ್ರಕಟಿಸಲಾಗಿದೆ. ತಳಮಟ್ಟದಲ್ಲಿ ಸಮಗ್ರ ಅಭಿವೃದ್ಧಿ ಇದರಿಂದ ಸಾಧ್ಯ’ ಎಂದರು.

ಪ್ರಣಾಳಿಕೆಯ ಪ್ರಮುಖ ಅಂಶಗಳು

*ರಾಜಕೀಯ ಗೂಂಡಾಗಿರಿ ನಿರ್ಮೂಲನೆ

*ಲಂಚದ ಬೇಡಿಕೆ ಇಲ್ಲದೆ ಸರ್ಕಾರಿ ಸೇವೆ

*ಹೋರ್ಡಿಂಗ್‌ಮುಕ್ತ ರಸ್ತೆಗಳು

*ಟೆಂಡರ್‌ ಶ್ಯೂರ್‌ ಕಾಮಗಾರಿಗಳು ಒಂದಕ್ಕೊಂದು ಪೂರಕವಾಗಿರುವಂತೆ ನೋಡಿಕೊಳ್ಳುವುದು

* ಪಬ್‌ ಮತ್ತು ಬಾರ್‌ಗಳು ನಿಯಮ ಪಾಲನೆ ಮಾಡುವುದನ್ನು ಕಡ್ಡಾಯಗೊಳಿಸುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT