ಬುಧವಾರ, ಜನವರಿ 29, 2020
26 °C

ಪೌರತ್ವ ಕಾಯ್ದೆ ವಿರೋಧಿಸಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಳ್ಳಾರಿಯ ಎಚ್‌.ಆರ್‌. ಗವಿಯಪ್ಪ ವೃತ್ತದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಯಿತು.

ವಿವಿಧ ಸಂಘ ಸಂಸ್ಥೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಬೃಹತ್‌ ತ್ರಿವರ್ಣ ಧ್ವಜ ಪ್ರತಿಭಟನೆಯಲ್ಲಿ ರಾರಾಜಿಸಿತು.

ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದ ಜನ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯಿಂದ ಬೆಂಗಳೂರು, ಹೊಸಪೇಟೆ ಕಡೆಗೆ ಹೋಗುವ ಮಾರ್ಗದಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು