ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಆನಂದ್‌ ಸಿಂಗ್‌ ಮತಯಾಚನೆ

Last Updated 10 ಏಪ್ರಿಲ್ 2019, 17:12 IST
ಅಕ್ಷರ ಗಾತ್ರ

ಹೊಸಪೇಟೆ: ಅನೇಕ ದಿನಗಳಿಂದ ಕ್ಷೇತ್ರದಿಂದ ದೂರವೇ ಉಳಿದಿದ್ದ ವಿಜಯನಗರ ಕ್ಷೇತ್ರದ ಶಾಸಕ ಆನಂದ್‌ ಸಿಂಗ್‌ ಬುಧವಾರ ಸಂಜೆ ನಗರದಲ್ಲಿ ಪ್ರತ್ಯಕ್ಷರಾಗಿ ಕಾಂಗ್ರೆಸ್‌ ಅಭ್ಯರ್ಥಿ ಪರ ಮತ ಯಾಚಿಸಿದರು.

ಬಿಳಿ ಗಡ್ಡ ಬಿಟ್ಟಿರುವ ಅವರನ್ನು ಕೆಲವರು ಏಕಾಏಕಿ ಗುರುತಿಸಲಿಲ್ಲ. ಹತ್ತಿರ ಹೋದ ನಂತರ ಗುರುತಿಸಿ, ಕೈ ಕುಲುಕಿ ಯೋಗ ಕ್ಷೇಮ ವಿಚಾರಿಸಿದರು.

ವಡಕರಾಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ಬಳಿಕ ಪಾದಗಟ್ಟೆ ಆಂಜನೇಯ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು. ನಂತರ ಸುನ್ನಿ ದರ್ಗಾ ಜಾಮೀಯ ಮಸೀದಿ, ಅಲ್ಲಿಯೇ ಇದ್ದ ಚರ್ಚ್‌ಗೆ ಭೇಟಿ ನೀಡಿದರು.

ನಂತರ ನೂರಾರು ಕಾರ್ಯಕರ್ತರೊಂದಿಗೆ ರ್‍ಯಾಲಿಯಲ್ಲಿ ಹೆಜ್ಜೆ ಹಾಕಿದರು.ಮಹಾತ್ಮ ಗಾಂಧಿ ವೃತ್ತ, ಬಸ್‌ ನಿಲ್ದಾಣ, ರೋಟರಿ ವೃತ್ತದ ಮೂಲಕ ಹಾದು ಪಟೇಲ್‌ ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ರ್‍ಯಾಲಿ ಕೊನೆಗೊಂಡಿತು.

ರ್‍ಯಾಲಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪ, ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಸಿರಾಜ್‌ ಶೇಖ್‌, ಜಿಲ್ಲಾ ಗ್ರಾಮೀಣ ಅಧ್ಯಕ್ಷ ಬಿ.ವಿ. ಶಿವಯೋಗಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಟಿಂಕರ್‌ ರಫೀಕ್‌, ಅಮಾಜಿ ಹೇಮಣ್ಣ, ನಗರಸಭೆ ಅಧ್ಯಕ್ಷ ಗುಜ್ಜಲ್‌ ನಿಂಗಪ್ಪ, ಮುಖಂಡರಾದ ವೆಂಕಟೇಶ ರೆಡ್ಡಿ, ಸಲೀಂ, ಗೌಸ್‌, ಗುಡಿಗುಂಟಿ ಮಲ್ಲಿಕಾರ್ಜುನ, ರತನ್‌ ಸಿಂಗ್‌, ನಿಂಬಗಲ್‌ ರಾಮಕೃಷ್ಣ, ಗುಜ್ಜಲ್‌ ರಘು, ಗುಜ್ಜಲ್‌ ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT