ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಬೆಂಗಳೂರು ಚಲೋ: ಕೆ.ನಾಗರತ್ನಮ್ಮ 

ಬುಧವಾರ, ಜೂನ್ 19, 2019
26 °C

ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಬೆಂಗಳೂರು ಚಲೋ: ಕೆ.ನಾಗರತ್ನಮ್ಮ 

Published:
Updated:

ಬಳ್ಳಾರಿ: ಅಂಗನವಾಡಿಗಳಲ್ಲೇ ಎಲ್ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಆಗ್ರಹಿಸಿ ಮೇ 30 ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ‌ ಜಿಲ್ಲಾ ಸಮಿತಿಯ ಗೌತವ ಅಧ್ಯಕ್ಷೆ ಕೆ.ನಾಗರತ್ನಮ್ಮ ಮತ್ತು ಪ್ರಧಾನ ಕಾರ್ಯದರ್ಶಿ ಎಂ. ಎರ್ರಮ್ಮ ತಿಳಿಸಿದರು.

ನಗರದಲ್ಲಿ‌ ಶನಿವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ಬಲಗೊಳಿಸಲು ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರದಿಂದ ಅಂಗನವಾಡಿಗಳು ಇನ್ನಷ್ಟು ಶೋಚನೀಯ ಸ್ಥಿತಿಗೆ ತಲುಪುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

' ಪೂರ್ವ ಪ್ರಾಥಮಿಕ ತರಗತಿಗಳನ್ನು ಅಂಗನವಾಡಿಗಳಲ್ಲೇ ಆರಂಭಿಸಿದರೆ ಮಕ್ಕಳು ಸರ್ಕಾರಿ ಶಾಲೆ ಕಡೆಗೆ ಹೋಗುವುದು ತಪ್ಪುತ್ತದೆ. ‌ಇಲ್ಲವಾದರೆ ಅಂಗನವಾಡಿಗಳನ್ನು ಮುಚ್ಚುವಂಥ ಪರಿಸ್ಥಿತಿ ಬಂದು, ಕಾರ್ಯಕರ್ತೆ ಯರು ಮತ್ತು ಸಹಾಯಕಿಯರ ಬದುಕು ಕೂಡ ಅತಂತ್ರವಾಗುತ್ತದೆ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !