ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ | ಎರಡನೇ ದಿನವೂ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Last Updated 14 ಜುಲೈ 2020, 8:42 IST
ಅಕ್ಷರ ಗಾತ್ರ

ಹೊಸಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ಮಂಗಳವಾರ ಎರಡನೇ ದಿನ ಪ್ರತ್ಯೇಕವಾಗಿ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ಆಶಾ ಕಾರ್ಯಕರ್ತೆಯರು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ, ಅಂಗನವಾಡಿ ಕಾರ್ಯಕರ್ತೆಯರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶ ಅವರಿಗೆ ಸಲ್ಲಿಸಿದರು.

ಲಾಕ್‌ಡೌನ್‌ ನಂತರ ಸತತವಾಗಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಮಾಸಿಕ ₹12,000 ವೇತನ ನಿಗದಿಪಡಿಸಬೇಕು. ಕೆಲಸದ ವೇಳೆ ಅಗತ್ಯ ಸುರಕ್ಷತಾ ಸಾಧನಗಳನ್ನು ನೀಡಬೇಕು. ಕೊರೊನಾ ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಬೇಕು ಎನ್ನುವುದು ಪ್ರಮುಖ ಬೇಡಿಕೆಗಳಾಗಿವೆ.

ಆಶಾ ಕಾರ್ಯಕರ್ತೆಯರಾದ ಚಂದ್ರಮ್ಮ, ಹುಲುಗಮ್ಮ, ಎಐಯುಟಿಯುಸಿ ತಾಲ್ಲೂಕು ಸಂಚಾಲಕ ಪಂಪಾಪತಿ ಇದ್ದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ₹50 ಲಕ್ಷ ವಿಮೆ ಘೋಷಿಸಬೇಕು. ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದವರಿಗೆ ಕಠಿಣ ಶಿಕ್ಷೆ ನೀಡಬೇಕು. ಎಲ್‌ಐಸಿ ಮೂಲಕ ನಿವೃತ್ತಿ ವೇತನದ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಸಂಘದ ತಾಲ್ಲೂಕು ಅಧ್ಯಕ್ಷೆ ಕೆ. ನಾಗರತ್ನಮ್ಮ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT