ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

7
ಮೇಲಧಿಕಾರಿ ಕಿರುಕುಳಕ್ಕೆ ಮನನೊಂದ ನೌಕರ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Published:
Updated:

ಹೊಸಪೇಟೆ: ಮೇಲಧಿಕಾರಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಮನನೊಂದು ಇಲ್ಲಿನ ಕೇಂದ್ರ ಬಸ್‌ ನಿಲ್ದಾಣದಲ್ಲಿ ‘ಡಿ’ ದರ್ಜೆ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ಸದಾಶಿವ (38) ಎಂಬುವರು ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದಾರೆ.

‘ವಿಷ ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದ ಸದಾಶಿವ ಅವರನ್ನು ಬಸ್‌ ನಿಲ್ದಾಣದ ಸಿಬ್ಬಂದಿ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳ್ಳಾರಿಯ ವಿಮ್ಸ್‌ಗೆ ಕಳಿಸಿಕೊಡಲಾಗಿದೆ’ ಎಂದು ಡಿವೈಎಸ್ಪಿ ಕೆ. ಶಿವಾರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮೇಲಧಿಕಾರಿಯ ಕಿರುಕುಳವೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸದಾಶಿವ ಅವರು ಪತ್ರ ಬರೆದಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಇನ್ನೂ ಅದು ಕೈಸೇರಿಲ್ಲ. ತನಿಖೆಯ ಬಳಿಕವಷ್ಟೇ ನಿಖರ ಕಾರಣ ಗೊತ್ತಾಗಲಿದೆ’ ಎಂದು ಹೇಳಿದರು.
ಸದಾಶಿವ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಬರೆದಿಟ್ಟಿದ್ದ ಮೂರು ಪುಟಗಳ ಪತ್ರ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ಉಪವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಮೊಹಮ್ಮದ್‌ ಫೈಜ್‌ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅಪಮಾನ ಮಾಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪತ್ರದಲ್ಲಿ ಬರೆದಿದ್ದಾರೆ.

ಈ ಕುರಿತು ಮೊಹಮ್ಮದ್‌ ಫೈಜ್‌ ಅವರನ್ನು ಸಂಪರ್ಕಿಸಿದಾಗ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !