ಬುಧವಾರ, ಸೆಪ್ಟೆಂಬರ್ 30, 2020
20 °C

ಅಯೋಧ್ಯೆಯಲ್ಲಿ ಮಂದಿರ ಶಿಲಾನ್ಯಾಸ: ಹಂಪಿಯಲ್ಲಿ ವಿಶೇಷ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹೊಸಪೇಟೆ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮ ಮಂದಿರದ ಶಿಲಾನ್ಯಾಸದ ಪ್ರಯುಕ್ತ ರಾಮನ ಭಕ್ತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಬುಧವಾರ ಇಲ್ಲಿನ ಹಂಪಿಯಲ್ಲಿ ಹಮ್ಮಿಕೊಂಡಿರುವ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನ, ಕೋದಂಡರಾಮ ದೇವಸ್ಥಾನ, ಉದ್ದಾನ ವೀರಭದ್ರೇಶ್ವರ ದೇವಸ್ಥಾನ, ಚಕ್ರತೀರ್ಥದ ರಾಮ–ಲಕ್ಷ್ಮಣ ದೇವಸ್ಥಾನ, ಹಂಪಿಗೆ ಹೊಂದಿಕೊಂಡಿರುವ ಅಂಜನಾದ್ರಿ ಬೆಟ್ಟದಲ್ಲಿ ಹೋಮ, ಹವನ, ಪೂಜೆ ಹಾಗೂ ವಿಶೇಷ ಪ್ರಾರ್ಥನೆಗಳು ಜರುಗುತ್ತಿವೆ.

ಸ್ಥಳೀಯರು ಸೇರಿದಂತೆ ಅನ್ಯ ಜಿಲ್ಲೆಯವರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ, ಶ್ರೀರಾಮ ಸೇನೆ ಕಾರ್ಯಕರ್ತರೂ ಇದ್ದಾರೆ. ಜಿಲ್ಲಾ ಬಿಜೆಪಿಯಿಂದ ನಗರದ ಎಲ್ಲ ವಾರ್ಡ್‌ಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೂತ್‌ ಮಟ್ಟದ ಕಾರ್ಯಕರ್ತರು ಭಾಗವಹಿಸಿದ್ದಾರೆ.

ರಾಮಾಯಣದಲ್ಲಿ ಹಂಪಿಯ ಕಿಷ್ಕಿಂದೆ, ಅಂಜನಾದ್ರಿ ಬೆಟ್ಟ, ಪಂಪಾ ಸರೋವರ, ರಘುನಾಥ ಮಾಲ್ಯವಂತ ಪರ್ವತ, ಸುಗ್ರೀವ ಗುಹೆ, ಸೀತೆಯ ಸೆರಗು, ಋಷಿಮುಖ ಪರ್ವತದ ಉಲ್ಲೇಖವಿದೆ. ರಾಮ–ಲಕ್ಷ್ಮಣ ಓಡಾಡಿದ ಪವಿತ್ರ ಜಾಗ ಎನ್ನುವುದು ಭಕ್ತರ ನಂಬಿಕೆ. ಈ ಸ್ಥಳಗಳನ್ನು ಕಣ್ತುಂಬಿಕೊಳ್ಳುವುದಕ್ಕಾಗಿಯೇ ನಿತ್ಯವೂ ವಿವಿಧ ಕಡೆಗಳಿಂದ ನೂರಾರು ಜನ ಬಂದು ಹೋಗುತ್ತಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು