ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

Last Updated 27 ಮೇ 2020, 11:44 IST
ಅಕ್ಷರ ಗಾತ್ರ

ಹೊಸಪೇಟೆ: ಮಹಾರಾಷ್ಟ್ರದಲ್ಲಿ ಮೇಲಿಂದ ಮೇಲೆ ಹಿಂದೂ ಸಂತರ ಹತ್ಯೆ ನಡೆಯುತ್ತಿರುವುದನ್ನು ಖಂಡಿಸಿ ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಬುಧವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ರಾಷ್ಟ್ರಪತಿ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು.‘ಆರು ತಿಂಗಳಿಂದ ಮಹಾರಾಷ್ಟ್ರದಲ್ಲಿ ಪದೇ ಪದೇ ಹಿಂದೂ ಸಾಧು ಸಂತರ ಹತ್ಯೆ ನಡೆಯುತ್ತಿವೆ. ಇತ್ತೀಚೆಗೆ ನಾಂದೇಡ್‌ನ ನಿರ್ವಾಣಿ ಮಠದ ಪೀಠಾಧಿಪತಿ ರುದ್ರಪಶುಪತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಹತ್ಯೆ ಮಾಡಲಾಗಿದೆ. ಸ್ವಾಮೀಜಿ ಪರಿಚಾರಕನ ಕೊಲೆಯೂ ನಡೆದಿದೆ. ಉದ್ಧವ್‌ ಠಾಕ್ರೆ ಅಧಿಕಾರಕ್ಕೆ ಬಂದ ನಂತರ ಸಂತರ ಹತ್ಯೆ ಪ್ರಕರಣಗಳು ಹೆಚ್ಚಾಗಿರುವುದು ಕಳವಳಕಾರಿ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
‘ಸಂತರ ಹತ್ಯೆಗೆ ನಿಖರ ಕಾರಣವೇನು ಎನ್ನುವುದನ್ನು ಪತ್ತೆ ಹಚ್ಚಲು ತನಿಖೆಗೆ ನಿರ್ದೇಶನ ಕೊಡಬೇಕು. ಸಂತರ ಹತ್ಯೆ ಮಾಡಿರುವವರಿಗೆ ಕಠಿಣ ಶಿಕ್ಷೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್ತಿನ ಮುಖಂಡ ನರಸಿಂಹಮೂರ್ತಿ, ಬಜರಂಗ ದಳದ ಪವನ್‌ ಪುರೋಹಿತ್‌, ಸುರೇಶ, ಬಿ.ಎನ್‌. ಮೂರ್ತಿ, ನಾಗರಾಜ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT