ಶುಕ್ರವಾರ, ಆಗಸ್ಟ್ 23, 2019
22 °C

ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್‌ ಆಚರಣೆ

Published:
Updated:
Prajavani

ಹೊಸಪೇಟೆ: ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್‌ ಹಬ್ಬವನ್ನು ಸೋಮವಾರ ನಗರದಲ್ಲಿ ಆಚರಿಸಲಾಯಿತು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ರಸ್ತೆ, ಬಳ್ಳಾರಿಯ ರಸ್ತೆ, ತಾಲ್ಲೂಕಿನ ಕಮಲಾಪುರ, ಮರಿಯಮ್ಮನಹಳ್ಳಿಯ ಈದ್ಗಾ ಮೈದಾನದಲ್ಲಿ ನೂರಾರು ಮುಸ್ಲಿಮರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.

ಹಿರಿಯರ ತ್ಯಾಗ, ಬಲಿದಾನವನ್ನು ಇದೇ ವೇಳೆ ಸ್ಮರಿಸಿಕೊಂಡರು. ನಂತರ ದಾನ ಧರ್ಮ ಮಾಡಿದರು. ಪಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾದ ಕಾರ್ಯಕರ್ತರು ಚಿತ್ತವಾಡ್ಗಿ ರಸ್ತೆಯಲ್ಲಿ ಈದ್ಗಾ ಮೈದಾನದ ಹೊರಗೆ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದರು. 

ಮುಖಂಡರಾದ ಮೊಹಮ್ಮದ್‌ ಇಮಾಮ್‌ ನಿಯಾಜಿ, ಖಾದರ್‌ ರಫಾಯಿ, ಕೆ. ಬಡಾವಲಿ, ಗೌಸ್‌, ಖಾಜಿ ನಿಯಾಜಿ ಮೊದಲಾದವರು ಇದ್ದರು.

Post Comments (+)