ಬುಧವಾರ, ಸೆಪ್ಟೆಂಬರ್ 22, 2021
23 °C

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡುವಂತೆ ಬಳ್ಳಾರಿ ಪಾಲಿಕೆ ಸದಸ್ಯರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಶಾಸಕ ಸೋಮಶೇಖರ ರೆಡ್ಡಿಗೆ ಸಚಿವ ಸ್ಥಾನ ನೀಡಿ ಇದರ ಜತೆ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಿ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯರು ಆಗ್ರಹಿಸಿದ್ದಾರೆ.

ಬಳ್ಳಾರಿ ಜಿಲ್ಲೆ ವಿಭಜನೆಯಾಗಿದೆ. ಐದು ತಾಲೂಕು ಉಳಿದಿದ್ದು, ಇವುಗಳಲ್ಲಿ ಮೂರು ಕಾಂಗ್ರೆಸ್, ಉಳಿದ ಎರಡು ಮಾತ್ರ ಬಿಜೆಪಿ ಅಧಿಕಾರಕ್ಕಿದೆ. ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಮುಂದಿನ ಚುನಾವಣೆಯಲ್ಲಿ ಐದು ಸ್ಥಾನಗಳು ಬಿಜೆಪಿ ತೆಕ್ಕೆಗೆ ಬರಲಿವೆ. ಬಿಜೆಪಿಯನ್ನು ಬಲಪಡಿಸಲು ಶಕ್ತಿ ಬಂದಂತೆ ಆಗುತ್ತದೆ.‌ ಅಲ್ಲದೇ, ಚಿಕ್ಕ ಜಿಲ್ಲೆ ಆಗಿರೋದರಿಂದ ಅಭಿವೃದ್ಧಿಗೆ ಪೂರಕವಾಗಲಿದೆ. ಹೀಗಾಗಿ ಶಾಸಕರಾದ ಶ್ರೀರಾಮುಲು, ಜಿ.ಸೋಮಶೇಖರರೆಡ್ಡಿಗೆ ಸಚಿವ ಸ್ಥಾನ ನೀಡಬೇಕೆಂದು ಸದಸ್ಯರಾದ ಹನುಮಂತ, ಶ್ರೀನಿವಾಸ ಮೋತ್ಕರ ಮಾಧ್ಯಮಗೋಷ್ಠಿಯಲ್ಲಿಂದು ಒತ್ತಾಯಿಸಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯರಾದ ಹನುಮಂತ, ಗೋವಿಂದ, ಸುರೇಂದ್ರ, ಕಲ್ಪನ, ಕೆ.ಎಸ್.ಅಶೋಕ, ವೇಮಣ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು