ಮಣ್ಣಿನ ಮೂರ್ತಿ ತಯಾರಿಕೆಗೆ ಅನುಮತಿ ಕಡ್ಡಾಯ

7
ಪಿಒಪಿ ವಿಗ್ರಹ ತಯಾರಕರು, ಮಾರಾಟಗಾರರ ಸಭೆ

ಮಣ್ಣಿನ ಮೂರ್ತಿ ತಯಾರಿಕೆಗೆ ಅನುಮತಿ ಕಡ್ಡಾಯ

Published:
Updated:

ಬಳ್ಳಾರಿ: ‘ಮಣ್ಣಿನ ಗಣಪನ ಮೂರ್ತಿಗಳನ್ನು ತಯಾರಿಸಲು ಪಾಲಿಕೆಯಿಂದ ಅನುಮತಿ ಪಡೆದು, ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಬೇಕು’ ಎಂದು ಪಾಲಿಕೆ ಆಯುಕ್ತ ನಾರಾಯಣಪ್ಪ ಹೇಳಿದರು.

ಪಾಲಿಕೆಯ ಸಭಾಂಗಣದಲ್ಲಿ ಶನಿವಾರ ಗಣಪನ ಮೂರ್ತಿ ತಯಾರಕರು ಮತ್ತು ಮಾರಾಟಗಾರರ ಸಭೆಯಲ್ಲಿ ಮಾತನಾಡಿದ ಅವರು,‘ಪರಿಸರ ಸಂರಕ್ಷಣೆ ಕಾಯ್ದೆ 1986ರ ಸೆಕ್ಷನ್ ಅನ್ವಯ ಪಿಒಪಿ ಮತ್ತು ಬಣ್ಣಲೇಪಿತ ಗಣಪನ ವಿಗ್ರಹಗಳ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಉಲ್ಲಂಘಿಸಿದರೆ ದಂಡ ಮತ್ತು ಜೈಲುವಾಸ ಕಟ್ಟಿಟ್ಟ ಬುತ್ತಿ’ ಎಂದು ಎಚ್ಚರಿಕೆ ನೀಡಿದರು.

‘ಪಿಒಪಿ ವಿಗ್ರಹಗಳು ಬೇರೆ ಜಿಲ್ಲೆಗಳಿಂದ ನಗರಕ್ಕೆ ಬರುವ ಸಾಧ್ಯತೆ ಇದ್ದು, ಚೆಕ್‌ಪೋಸ್ಟ್‌ಗಳ ಬಳಿ ತಪಾಸಣೆ ಮಾಡಲಾಗುವುದು’ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !