ಭಾನುವಾರ, ಸೆಪ್ಟೆಂಬರ್ 20, 2020
21 °C

ಡಿ.ಜೆ.ಹಳ್ಳಿ ಗಲಭೆ: ಸಿಬಿಐ ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಬೆಂಗಳೂರಿನ ಡಿ.ಜಿ.ಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಗಲಭೆಯನ್ನು‌ ಸಿಬಿಐ ತನಿಖೆಗೆ ಒಳಪಡಿಸಬೇಕು. ಇಲ್ಲವಾದರೆ ಬಳ್ಳಾರಿಯಿಂದ ರಾಜಭವನ ಚಲೋ ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗುವುದು ಎಂದು ಅಖಿಲ ಕರ್ನಾಟಕ ಭೋವಿ ಯುವ ವೇದಿಕೆಯ  ರಾಜ್ಯ ಘಟಕದ ಅಧ್ಯಕ್ಷ ವೈ.ಕೊಟ್ರೇಶ ಆಗ್ರಹಿಸಿದರು.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆ ಮೇಲೆ ಹಲ್ಲೆ ನಡೆಸಿದ್ದೇ ಅಲ್ಲದೆ ಅವರ ಕೊಲೆ ಯತ್ನವೂ ನಡೆದಿರುವುದು ವಿಷಾದನೀಯ. ಘಟನೆಗೆ ಪೊಲೀಸರ ವೈಫಲ್ಯವೂ ಕಾರಣ ಎಂದು ಆರೋಪಿಸಿದರು

ಶಾಸಕರ ಮನೆ ಮೇಲೆ ಅಮಾನವೀಯವಾಗಿ ದಾಳಿ ನಡೆಸಿ, ಸಾರ್ವಜನಿಕರ ಆಸ್ತಿಗೆ ಹಾನಿ ಮಾಡಿದ ಮುಸ್ಲಿಂ ಪುಂಡರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿಗೆ ಸೇರಿದ ಭೋವಿ ಸಮಯದಾಯದ ಶಾಸಕರು ಘಟನೆಯ ಬಗ್ಗೆ ಯಾರ ವಿರುದ್ಧವೂ ದೂರು ನೀಡುವುದಿಲ್ಲ ಎಂದಿದ್ದಾರೆ. ಅದಕ್ಕೆ ಅವರಿಗೆ ಇರುವ ಪ್ರಾಣಭೀತಿಯೇ ಕಾರಣ. ಅವರಿಗೆ, ಅವರ ಕುಟುಂಬದ ಸದಸ್ಯರಿಗೆ ಬಿಗಿ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ವಿ.ಮಲ್ಲಿಕಾರ್ಜುನ, ಚಿನ್ನಪ್ಪ, ರಾಮಾಂಜಿ ಇದ್ದರು.ಚ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು