ಮಂಗಳವಾರ, ಸೆಪ್ಟೆಂಬರ್ 28, 2021
21 °C

ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ(ವಿಜಯನಗರ): ತಾಲ್ಲೂಕಿನ ಗುಂಡ್ಲುವದ್ದೀಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲಾಯಿತು.

ಗುರುವಾರ ಶಾಲೆಯ ಆವರಣದಲ್ಲಿ ಇಂಡಿಯನ್ ಬ್ಯಾಂಕ್ ಶಾಖೆಯ ಸಿಬ್ಬಂದಿ ಹೊಸ ಖಾತೆಯನ್ನು ತೆರೆಯಲು ಅಗತ್ಯ ದಾಖಲಾತಿಗಳನ್ನು ವಿದ್ಯಾರ್ಥಿಗಳಿಂದ ಪಡೆದು ಪರಿಶೀಲನೆ ನಡೆಸಿದರು. ‘ವಿದ್ಯಾರ್ಥಿ ವೇತನ ಹಾಗೂ ಇನ್ನಿತರ ಕಾರ್ಯಗಳಿಗಾಗಿ ಬ್ಯಾಂಕ್ ಖಾತೆಯನ್ನು ಶೂನ್ಯ ಮೊತ್ತದಲ್ಲಿ ತೆರೆಯಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿಯೂ ಇದರಿಂದ ಪ್ರಯೋಜನವಾಗಲಿದೆ’ ಎಂದು ಶಾಲೆಯ ಮುಖ್ಯ ಶಿಕ್ಷಕ ಎನ್.ಷಣ್ಮುಖಪ್ಪ ತಿಳಿಸಿದರು.

ಇಂಡಿಯನ್ ಬ್ಯಾಂಕ್ ವ್ಯವಸ್ಥಾಪಕ ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಈಶ್ವರ್ ಗೌಡ, ಶಿಕ್ಷಕರಾದ ಚಾರಿ ದುರುಗಪ್ಪ, ಅಂಬರೀಷ್‌, ಮಂಜುಳಾ, ಹರೀಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.