ಶನಿವಾರ, ಮಾರ್ಚ್ 6, 2021
32 °C

ಪಂಚಮಸಾಲಿ ಹೋರಾಟಕ್ಕೆ ಸಿ.ಎಂ. ನಿರ್ಲಕ್ಷ್ಯ ಸಲ್ಲ: ಜಯಮೃತ್ಯುಂಜಯ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮರಿಯಮ್ಮನಹಳ್ಳಿ (ಹೊಸಪೇಟೆ ತಾಲ್ಲೂಕು)/ಹಗರಿಬೊಮ್ಮನಹಳ್ಳಿ: ‘2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಪಂಚಮಸಾಲಿ ಸಮಾಜದವರು ನಡೆಸುತ್ತಿರುವ ಹೋರಾಟವನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಸ್ಪಂದನೆ ತೋರದೆ ನಿರ್ಲಕ್ಷ್ಯ ವಹಿಸುತ್ತಿರುವುದು ಸಲ್ಲದು. ಇದೇ ಧೋರಣೆ ತೋರಿದರೆ ಬರುವ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಕೂಡಲಸಂಗಮದಿಂದ ಆರಂಭಗೊಂಡಿರುವ ಪಾದಯಾತ್ರೆ ಶುಕ್ರವಾರ ತಾಲ್ಲೂಕಿನ ಮರಿಯಮ್ಮನಹಳ್ಳಿ ಗಡಿ ದಾಟಿ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಅಂಕಸಮುದ್ರ ಪ್ರವೇಶಿಸಿತು. ಒಂಬತ್ತು ದಿನಗಳಲ್ಲಿ ಒಟ್ಟು 230 ಕಿ.ಮೀ. ಪಾದಯಾತ್ರೆ ಪೂರೈಸಿದೆ.

‘ಮುಖ್ಯಮಂತ್ರಿಗಳು ಹಿಂದುಳಿದ ವರ್ಗದಿಂದ ಮಾಹಿತಿಯನ್ನು ತರಿಸಿಕೊಂಡು, ಕೂಡಲೇ 2ಎ ಮೀಸಲಾತಿ ಕೊಡಬೇಕು. ಇಲ್ಲವಾದಲ್ಲಿ ಹರಿಹರದಲ್ಲಿ ಜ. 28ರಂದು ನಡೆಯಲಿರುವ ಸಮಾವೇಶದಲ್ಲಿ ಕಠೋರ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಹೇಳಿದರು.

ಇನ್ನು ಮರಿಯಮ್ಮನಹಳ್ಳಿಯಲ್ಲಿ ಮಾತನಾಡಿದ ಶಾಸಕ ಎಲ್‌.ಬಿ.ಪಿ. ಭೀಮಾ ನಾಯ್ಕ, ‘ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಒಂದುವೇಳೆ ಎಲ್ಲ ಪಂಚಮಸಾಲಿ ಸಮಾಜದ ಶಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜೀನಾಮೆ ಕೊಟ್ಟರೆ ನಾನು ಅವರ ಹಾದಿ ತುಳಿಯಲು ಸಿದ್ಧನಿದ್ದೇನೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು