ಬಳ್ಳಾರಿ: ‘ನಾನು ಮುಖ್ಯಮಂತ್ರಿ ಆಗುತ್ತೇನೆಂದು ಅಂದುಕೊಂಡಿರಲಿಲ್ಲ. ಹಿರಿಯರ ಆಶೀರ್ವಾದ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬೆಂಬಲದಿಂದ ಈ ಸ್ಥಾನ ಸಿಕ್ಕಿದೆ. ಪಕ್ಷದ ಹೈಕಮಾಂಡ್ ಸಹ ನನ್ನನ್ನು ಬೆಂಬಲಿಸಿದೆ’ ಎಂದು ಬಸವರಾಜ ಬೊಮ್ಮಾಯಿ ಸ್ಮರಿಸಿದರು.
ಇಲ್ಲಿನ ವೀರಶೈವ ವಿದ್ಯಾವರ್ಧಕ್ಕೆ ದಾನವಾಗಿ ಬಂದಿರುವ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ ಹಾಗೂ ಕಿಂಡರ್ ಗಾರ್ಟನ್ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಮುಖ್ಯಮಂತ್ರಿ ಸ್ಥಾನವನ್ನು ನಾನು ಅಧಿಕಾರ ಎಂದು ಭಾವಿಸಿಲ್ಲ. ಜವಾಬ್ದಾರಿ ಅಂದುಕೊಂಡಿದ್ದೇನೆ. ಅತೀ ಜಾಗರೂಕತೆಯಿಂದ ಹೊಣೆಗಾರಿಕೆ ನಿರ್ವಹಿಸುತ್ತೇನೆ. ಜನರ ಅಪೇಕ್ಷೆಯಂತೆ ಕೆಲಸ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.
ಇವನ್ನೂ ಓದಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.