ಶುಕ್ರವಾರ, ಡಿಸೆಂಬರ್ 4, 2020
21 °C

ಶಾಸಕ ಎಸ್. ಭೀಮಾನಾಯ್ಕ್‌ ವಿರುದ್ಧ ಹಗರಿಬೊಮ್ಮನಹಳ್ಳಿ ಬಂದ್ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಗರಿಬೊಮ್ಮನಹಳ್ಳಿ: ಶಾಸಕ ಎಸ್. ಭೀಮಾನಾಯ್ಕ್‌ ವಿರುದ್ಧ ಬಿಜೆಪಿ ಕರೆ ನೀಡಿದ್ದ ಬುಧವಾರದ ಬಂದ್ ಪ್ರಯುಕ್ತ ಪಟ್ಟಣದ ಬಹುತೇಕ ಅಂಗಡಿಗಳು ಮುಚ್ಚಿವೆ.

ಪಟ್ಟಣದ ಬಸವೇಶ್ವರ ಬಜಾರ್‌ನಲ್ಲಿ ಎಲ್ಲ ಅಂಗಡಿ ಮುಂಗಟ್ಟು ಬಂದ್ ಆಗಿವೆ. ವಾಹನ ಸಂಚಾರ ಎಂದಿನಂತೆ ನಡೆದಿದೆ.

ರಾಜ್ಯ ಹೆದ್ದಾರಿಯ ಒಂದು ಪಕ್ಕದ ರಸ್ತೆಯಲ್ಲಿ ಬೃಹತ್ ವೇದಿಕೆ‌ ನಿರ್ಮಾಣ ಮಾಡಲಾಗಿದೆ. ಬೈಪಾಸ್ ಮೂಲಕ ಭಾರಿ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಇತ್ತೀಚೆಗೆ ನಡೆದ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಶಾಸಕರು ಗೂಂಡಾವರ್ತನೆ ತೋರಿದ್ದಾರೆ ಎಂದು ದೂರಿ‌ ಜಿಲ್ಲೆಯ ವಿವಿಧೆಡೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಬಿಜೆಪಿ ಮಾಜಿ ಶಾಸಕ ಕೆ.ನೇಮರಾಜ ನಾಯ್ಕ ಬಂದ್ ಗೆ ಕರೆ ಕೊಟ್ಟಿದ್ದರು.

ಬಂದ್ ಪ್ರಯುಕ್ತ ಮಧ್ಯಾಹ್ನ 12 ಗಂಟೆಗೆ ಬೃಹತ್ ಪ್ರತಿಭಟನೆ ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು