ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಕೊರೊನಾ ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆ

Last Updated 31 ಮೇ 2020, 12:01 IST
ಅಕ್ಷರ ಗಾತ್ರ

ಹೊಸಪೇಟೆ: ಬಳ್ಳಾರಿ ಜಿಲ್ಲೆಯಲ್ಲಿ ಭಾನುವಾರ ಮತ್ತೆ ಮೂವರಿಗೆ ಕೋವಿಡ್‌–19 ದೃಢಪಟ್ಟಿದೆ.

ಜಿಲ್ಲೆಯ ಹರಪನಹಳ್ಳಿ, ಕೊಟ್ಟೂರು ಹಾಗೂ ಹೊಸಪೇಟೆ ತಾಲ್ಲೂಕಿನ 88–ಮುದ್ಲಾಪುರ ಗ್ರಾಮದ ವ್ಯಕ್ತಿಯಲ್ಲಿ ಸೋಂಕಿರುವುದು ಖಚಿತವಾಗಿದೆ. ಈ ಪೈಕಿ ಒಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ ಇದ್ದಾರೆ. ಸೋಂಕು ಹೇಗೆ ತಗುಲಿತು ಎನ್ನುವುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ತಿಳಿಸಿದ್ದಾರೆ.

ಹೊಸದಾಗಿ ಮೂರು ಕೋವಿಡ್‌ ಪ್ರಕರಣಗಳು ವರದಿಯಾಗಿರುವುದರಿಂದ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. 51 ಜನ ಸೋಂಕಿತರಲ್ಲಿ 27 ಜನ ಗುಣಮುಖರಾಗಿ ಮನೆ ಸೇರಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT