ಬಳ್ಳಾರಿ ಲೋಕಸಭೆ ಉಪಚುನಾವಣೆ; ಮತ ಎಣಿಕೆಗೆ ಸಕಲ ‌ಸಿದ್ಧತೆ

7

ಬಳ್ಳಾರಿ ಲೋಕಸಭೆ ಉಪಚುನಾವಣೆ; ಮತ ಎಣಿಕೆಗೆ ಸಕಲ ‌ಸಿದ್ಧತೆ

Published:
Updated:

ಬಳ್ಳಾರಿ: ‌ಲೋಕಸಭೆ ಉಪಚುನಾವಣೆಯ ಮತ ಎಣಿಕೆ ನ.6 ರಂದು ನಡೆಯಲಿದ್ದು ಎಲ್ಲ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ‌ಚುನಾವಣಾಧಿಕಾರಿ ಡಾ.ವಿ.ರಾಮ ಪ್ರಸಾದ್ ಮನೋಹರ ತಿಳಿಸಿದರು.

ಮತ ಎಣಿಕೆ ನಡೆಯಲಿರುವ ನಗರದ ಆರ್‌ಬಿವೈ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಣಿಕೆ ಸಲುವಾಗಿ ಎಂಟು ಕೊಠಡಿಯಲ್ಲಿ 120 ಟೇಬಲ್ ಅಳವಡಿಸಲಾಗಿದ್ದು, ಪ್ರತಿ ಟೇಬಲ್‌ಗೂ ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ. ಎಣಿಕೆ ಮಧ್ಯಾಹ್ನ 12ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದರು.

ಮತ ಎಣಿಕೆ‌ ಕೇಂದ್ರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುವುದು ‌ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ತಿಳಿಸಿದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !