ಸೋಮವಾರ, ಜೂಲೈ 13, 2020
23 °C

ಬಳ್ಳಾರಿ: ಕಳಪೆ ಕಾಮಗಾರಿ, ಇಂಗು ಗುಂಡಿ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೂಡ್ಲಿಗಿ: ತಾಲ್ಲೂಕಿನ ಕಾಟ್ರಹಳ್ಳಿ ಬಳಿ ನಿರ್ಮಾಣ ಮಾಡಿರುವ ಇಂಗು ಗುಂಡಿಯ ಕಾಮಗಾರಿ ತೀವ್ರ ಕಳಪೆಯಾಗಿದ್ದು, ಮಂಗಳವಾರ ರಾತ್ರಿ ಸುರಿದ ಮಳೆಗೆ ಬಿರುಕು ಬಿಟ್ಟು, ಕುಸಿಯುವ ಹಂತ ತಲುಪಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಕುರಿತು ಪ್ರಜಾವಾಣಿಗೆ ಮಾಹಿತಿ ನೀಡಿರುವ ಗ್ರಾಮದ ವೀರೇಶ್, ಬೆಳ್ಳಗಟ್ಟೆ ಗ್ರಾಮ ಪಂಚಾಯ್ತಿಯ 2020-21ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಇಂಗು ಗುಂಡಿ ನಿರ್ಮಾಣ ಮಾಡಲಾಗಿದೆ. ಕಾಮಗಾರಿ ನಡೆಸಿದ ಬಗ್ಗೆ ಇಂಗು ಗುಂಡಿ ಬಳಿ ಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಯಾವುದೇ ವಿವರ ಇಲ್ಲ. ಕಳಪೆ ಕಾಮಗಾರಿಯಿಂದ ಇಂಗು ಗುಂಡಿಯ ಗೋಡೆಗಳು ನೀರಿನಲ್ಲಿ ಕರಗಿ ಹೋಗುವ ರೀತಿಯಲ್ಲಿ ಬಿರುಕು ಬಿಟ್ಟಿದೆ. ಈ ಗುಂಡಿಯಲ್ಲಿ ಈಗ ನೀರು ನಿಂತಿದ್ದು, ಕುರಿ, ಜಾನುವಾರುಗಳು ನೀರು ಕುಡಿಯಲು ಹೋದರೆ ಗುಂಡಿ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಕಳಪೆ ಕಾಮಗಾರಿ ನಡೆಸಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆಯಲು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಸವರಾಜ್ ಅವರಿಗೆ ಪೋನ್ ಮಾಡಿದರೆ, ಸ್ವಿಚ್ ಆಫ್ ಅಗಿತ್ತು.

ಈ ಬಗ್ಗೆ ಪ್ರತಿ ಕ್ರಿಯೆ ನೀಡಿರುವ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಬಸಣ್ಣ, ಇಂದೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು