ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಪ್ರಚಾರ

ಶುಕ್ರವಾರ, ಏಪ್ರಿಲ್ 19, 2019
22 °C

ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಪ್ರಚಾರ

Published:
Updated:
Prajavani

ಹೊಸಪೇಟೆ: ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪನವರು ಗುರುವಾರ ನಗರದ ಮೇಜಾರ್‌ನಲ್ಲಿ ಪ್ರಚಾರ ಕೈಗೊಂಡರು.

ವಡಕರಾಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೇನ್‌ ಬಜಾರ್‌ನ ಪ್ರಮುಖ ರಸ್ತೆಗಳಲ್ಲಿ ತೆರೆದ ವಾಹನದಲ್ಲಿ ಮತಯಾಚಿಸಿದರು.

‘ಐದು ವರ್ಷಗಳಲ್ಲಿ ಮೋದಿಯವರು ಉತ್ತಮ ಕೆಲಸ ಮಾಡಿದ್ದಾರೆ. ಮತ್ತೊಮ್ಮೆ ಅವರು ಪ್ರಧಾನಿಯಾಗುವುದು ಖಚಿತ. ಜಿಲ್ಲೆಯ ಜನ ನನ್ನನ್ನು ಗೆಲ್ಲಿಸಿ, ಮೋದಿಯವರ ಕೈ ಬಲಪಡಿಸಬೇಕು’ ಎಂದು ದೇವೇಂದ್ರಪ್ಪ ಮನವಿ ಮಾಡಿದರು.

ಮುಖಂಡ ಮೃತ್ಯುಂಜಯ ಜಿನಗಾ ಮಾತನಾಡಿ, ‘ಮೋದಿಯವರ ಆಡಳಿತದ ಅವಧಿಯಲ್ಲಿ ಭಾರತಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಮನ್ನಣೆ ಸಿಕ್ಕಿದೆ. ಅಲ್ಲದೇ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಹಿಂದಿನ ಸರ್ಕಾರ ಮಾಡದ ಕೆಲಸವನ್ನು ಅವರು ಮಾಡಿ ತೋರಿಸಿದ್ದಾರೆ. ಶುದ್ಧ ಆಡಳಿತ ನೀಡಿದ್ದಾರೆ’ ಎಂದು ಹೇಳಿದರು.

ಮುಖಂಡರಾದ ವೈ. ಯಮುನೇಶ, ಬಸವರಾಜ ನಾಲತ್ವಾಡ, ಭರಮನಗೌಡ, ಪಂಚಪ್ಪ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !