ಬುಧವಾರ, ಏಪ್ರಿಲ್ 14, 2021
24 °C

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ: ಜಿಲ್ಲಾ ಮಟ್ಟದ ಕಾರ್ಯಕಾರಿಣಿ 10ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಮಟ್ಟದ ಕಾರ್ಯಕಾರಿಣಿ ಸಭೆಯು ಮಾ. 10ರಂದು ನಗರದ ಗುರು ಫಂಕ್ಷನ್ ಹಾಲ್ ನಲ್ಲಿ ನಡೆಯಲಿದೆ ಎಂದು ಮೋರ್ಚಾದ ಅಧ್ಯಕ್ಷ ಸಿ.ಇಬ್ರಾಹಿಂ, ಉಪಾಧ್ಯಕ್ಷ ನೀಲೇಶ್ ಜೈನ್ ತಿಳಿಸಿದರು.

'ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಮುಜಮ್ಮಿಲ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಸಯ್ಯದ್ ಸಲಾಂ, ಉಪಾಧ್ಯಕ್ಷ ನೂರ್ ಭಾಷಾ ಪಾಲ್ಗೊಳ್ಳಲಿದ್ದಾರೆ. ಶಾಸಕ‌ಜಿ.ಸೋಮಶೇಖರ ರೆಡ್ಡಿ ಉದ್ಘಾಟಿಸಲಿದ್ದಾರೆ' ಎಂದು ನಗರದಲ್ಲಿ‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

'ಹಜ್ ಸಮಿತಿ‌ ಸದಸ್ಯ ಮೈನುದ್ದೀನ್, ರಾಜ್ಯ ಕಾರ್ಯದರ್ಶಿ ಶಾಹೀನಾ ಅಬ್ಬಾಸ್ ಅವರೊಂದಿಗೆ ಜಿಲ್ಲೆಯ ಎಲ್ಲ ಮಂಡಳಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.