ಭಾನುವಾರ, ಡಿಸೆಂಬರ್ 8, 2019
25 °C

ಬಿಜೆಪಿ ಅಧಿಕೃತ ಅಭ್ಯರ್ಥಿ ಬಳಿಯೇ ಮತ ಯಾಚಿಸಿದ ಬಂಡಾಯ ಅಭ್ಯರ್ಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಬಿಜೆಪಿ ಬಂಡಾಯ ಅಭ್ಯರ್ಥಿ ಕವಿರಾಜ್‌ ಅರಸ್‌ ಅವರು ಸೋಮವಾರ ನಗರದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಆನಂದ್‌ ಸಿಂಗ್‌ ಅವರಿಗೆ ಮತ ನೀಡುವಂತೆ ಕೇಳಿಕೊಂಡರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಪ್ರಚಾರ ಸಭೆ ನಡೆಯುತ್ತಿತ್ತು. ಬಂಡಾಯ ಅಭ್ಯರ್ಥಿ ಕವಿರಾಜ್‌ ಅರಸ್‌ ಪ್ರವೇಶ ದ್ವಾರದಲ್ಲಿ ನಿಂತುಕೊಂಡು, ಅಲ್ಲಿಗೆ ಬಂದು ಹೋಗುತ್ತಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಕರಪತ್ರಗಳನ್ನು ಕೊಟ್ಟು ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಸಭೆ ಮುಗಿದ ನಂತರ ಅಲ್ಲಿಂದ ಹೊರ ಹೋಗುತ್ತಿದ್ದ ಆನಂದ್‌ ಸಿಂಗ್‌ ಅವರಿಗೆ ಅರಸ್‌ ಕೈಮುಗಿದು, ತಮ್ಮನ್ನು ಬೆಂಬಲಿಸಲು ಕೋರಿದರು. ಅದಕ್ಕೆ ಸಿಂಗ್‌ ಏನನ್ನೂ ಪ್ರತಿಕ್ರಿಯಿಸದೇ ಅಲ್ಲಿಂದ ನಿರ್ಗಮಿಸಿದರು. ಅದಾದ ನಂತರ ಸಂಸದ ವೈ.ದೇವೇಂದ್ರಪ್ಪ, ಶಾಸಕ ರಾಜುಗೌಡ ಅವರ ಕೈಕುಲುಕಿ, ಕರಪತ್ರ ಕೊಟ್ಟರು. ಅದನ್ನು ನೋಡುತ್ತಿದ್ದ ಕಾರ್ಯಕರ್ತರು ಮುಸಿಮುಸಿ ನಗುತ್ತಿದ್ದರು.

‘ನಾನು ನಿಮ್ಮವನೇ. ಪಕ್ಷ ದ್ರೋಹಿಗೆ ಟಿಕೆಟ್‌ ಕೊಟ್ಟಿದ್ದಾರೆ. ನಾನು ಸ್ವಾಭಿಮಾನಕ್ಕಾಗಿ ಚುನಾವಣೆಗೆ ನಿಂತಿದ್ದೇನೆ. ನೀವೆಲ್ಲ ನನಗೆ ಖಂಡಿತವಾಗಿಯೂ ಬೆಂಬಲಿಸುತ್ತೀರಿ ಎಂಬ ಭರವಸೆ ಇದೆ’ ಎಂದು ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಅರಸ್‌ ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು