ಶನಿವಾರ, ಫೆಬ್ರವರಿ 27, 2021
30 °C

ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಕ್ಷಣಗಣನೆ: ಜೀಪ್ ಓಡಿಸಿ ಗಮನ ಸೆಳೆದ ಆನಂದ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳ ಮಹಿಳಾ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕಾರಿಣಿಗೆ ಬಂದಿದ್ದಾರೆ. ಕಾರ್ಯಕಾರಿಣಿ ನಿಮಿತ್ತ ಇಡೀ ನಗರ ಬಿಜೆಪಿಯ ಬಾವುಟ, ನಾಯಕರ ಭಾವಚಿತ್ರವಿರುವ ಫ್ಲೆಕ್ಸ್ ಗಳಿಂದ ಕಂಗೊಳಿಸುತ್ತಿದೆ.

ಕಾರ್ಯಕಾರಿಣಿಗೂ ಮುನ್ನ ಬಿಜೆಪಿ ಕಾರ್ಯಕರ್ತರು ಕೈಗೊಂಡಿರುವ ಬೈಕ್‌ ರ್‍ಯಾಲಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತೆರೆದ ಜೀಪ್ ಚಾಲನೆ ಮಾಡಿ ಗಮನ ಸೆಳೆದರು. ಅವರ ಪಕ್ಕ ನಳಿನ್ ಕುಮಾ್ ಕಟೀಲ್ ಆಸೀನರಾದರೆ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆ ಡಿ. ಪುರಂದೇಶ್ವರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳೆ ಜೀಪ್‌ನಲ್ಲಿ ನಿಂತುಕೊಂಡಿದ್ದಾರೆ.

ರ್‍ಯಾಲಿಯು‌ ನಗರದ ಅಮರಾವತಿ ಅತಿಥಿ ಗೃಹದಿಂದ ಕಾಲೇಜು ರಸ್ತೆ, ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ರೋಟರಿ ವೃತ್ತದ ಮೂಲಕ ಹಾದು ಕಾರ್ಯಕಾರಿಣಿ ನಡೆಯಲಿರುವ ಸ್ಟೇಷನ್ ರಸ್ತೆಯ ಪ್ರಿಯದರ್ಶಿನಿ ಪ್ರೈಡ್ ಹೋಟೆಲ್ ಬಳಿ ಕೊನೆಗೊಂಡಿತು.

ಸಂಸದ ವೈ.ದೇವೇಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್ ಮೊದಲಾದವರು ಇದ್ದಾರೆ. ಕೆಲವೇ ಕ್ಷಣಗಳಲ್ಲಿ ಕಾರ್ಯಕಾರಿಣಿ ಉದ್ಘಾಟನಾ ಸಮಾರಂಭ ನಡೆಯಲಿದೆ.


ಬಿಜೆಪಿ ಕಾರ್ಯಕರ್ತರಿಂದ ಬೈಕ್ ರ್‍ಯಾಲಿ

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು