ಬುಧವಾರ, ಜನವರಿ 27, 2021
16 °C

ಬಿಜೆಪಿ ಯುವ ಮೋರ್ಚಾದಿಂದ ಬೈಕ್‌ ರ್‍ಯಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಶನಿವಾರ ನಗರಕ್ಕೆ ಬಂದ ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಸಂದೀಪ್‌ ಕುಮಾರ್‌ ಅವರಿಗೆ ಪಕ್ಷದ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.

ನಗರ ಹೊರವಲಯದಲ್ಲಿ ಅವರನ್ನು ಬರಮಾಡಿಕೊಂಡ ಕಾರ್ಯಕರ್ತರು, ಬೃಹತ್‌ ಬೈಕ್‌ ರ್‍ಯಾಲಿಯಲ್ಲಿ ನಗರಕ್ಕೆ ಕರೆತಂದರು. ನಗರದ ವಾಲ್ಮೀಕಿ ವೃತ್ತ, ರಾಮ ಟಾಕೀಸ್‌, ಮಹಾತ್ಮ ಗಾಂಧಿ ವೃತ್ತ, ಬಸ್‌ ನಿಲ್ದಾಣ, ರೋಟರಿ ವೃತ್ತದ ಮೂಲಕ ಹಾದು ಪಟೇಲ್‌ ನಗರದ ಪಕ್ಷದ ಕಚೇರಿಯಲ್ಲಿ ಸಮಾವೇಶಗೊಂಡರು.

ಬಳಿಕ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ ಅವರು ಸಂದೀಪ್‌ ಕುಮಾರ್‌ ಅವರನ್ನು ಸತ್ಕರಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂದೀಪ್‌ ಕುಮಾರ್‌, ‘ಬಿಜೆಪಿ ಈ ಹಿಂದಿನ ಬಿಜೆಪಿಯಾಗಿ ಉಳಿದಿಲ್ಲ. ಈಗ ಪಕ್ಷದ ಬೇರುಗಳು ಎಲ್ಲೆಡೆ ಹರಡಿವೆ. ಬರುವ ದಿನಗಳಲ್ಲಿ ಆ ಬೇರುಗಳು ಇನ್ನಷ್ಟು ಗಟ್ಟಿಗೊಳಿಸಲು ಎಲ್ಲರೂ ಶ್ರಮಿಸೋಣ’ ಎಂದರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸೋಮನಗೌಡ, ಮಂಡಲ ಯುವ ಮೋರ್ಚಾ ಅಧ್ಯಕ್ಷ ರಾಜಶೇಖರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.