ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ನಿಷೇಧಾಜ್ಞೆ ಮಧ್ಯೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Last Updated 5 ಮೇ 2021, 7:47 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕೋವಿಡ್‌ ಲಾಕ್‌ಡೌನ್‌ ನಡುವೆಯೂ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸೆಕ್ಷನ್‌ 144 ಕರ್ಫ್ಯೂ ಜಾರಿಯಲ್ಲಿರುವುದರಿಂದ ಜನ ಒಂದೆಡೆ ಗುಂಪು ಗೂಡುವಂತಿಲ್ಲ. ಆದರೆ, ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಪ್ರತಿಭಟನೆ ನಡೆಸಿದರು. ಎಲ್ಲರೂ ಮಾಸ್ಕ್‌ ಧರಿಸಿದ್ದರು. ಆದರೆ, ಅಂತರವಿರಲಿಲ್ಲ. ಪಟ್ಟಣ ಠಾಣೆಯ ಕೂಗಳತೆಯ ದೂರದಲ್ಲೇ ಪ್ರತಿಭಟನೆ ನಡೆದರೂ ಪೊಲೀಸರು ಅದನ್ನು ತಡೆಯಲಿಲ್ಲ.

ಮಂಗಳವಾರ ಮುನ್ಸಿಪಲ್‌ ಮೈದಾನದಲ್ಲಿ ಮರ ಕಡಿದಿರುವುದನ್ನು ವಿರೋಧಿಸಿ ಪರಿಸರ ಪ್ರೇಮಿಗಳು ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ತಡೆದು, ಅಲ್ಲಿಂದ ಅವರನ್ನು ತೆರವುಗೊಳಿಸಿದ್ದರು. ಪೊಲೀಸರ ಈ ಇಬ್ಬಗೆಯ ನೀತಿಗೆ ಸಾರ್ವಜನಿಕರು ಆಕ್ಷೇಪ ಎತ್ತಿದ್ದಾರೆ. ಈ ಸಂಬಂಧ ಪಟ್ಟಣ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಅವರನ್ನು ಸಂಪರ್ಕಿಸಿದಾಗ ಅವರು ಮಾಹಿತಿಗೆ ಲಭ್ಯರಾಗಲಿಲ್ಲ.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ನಡೆಸಿದ್ದಾರೆ ಎನ್ನಲಾದ ಹಿಂಸಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟಿಎಂಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬಳ್ಳಾರಿ ಜಿಲ್ಲೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ವೀರಾಂಜನೇಯ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶಂಕರ್ ಮೇಟಿ, ಉಪಾಧ್ಯಕ್ಷ ಕೆ.ಮಧುಸೂದನ್, ಬಿ.ಶಂಕರ್, ಕಾಸೆಟಿ ಉಮಾಪತಿ, ಕೆ.ಎಸ್. ಸತ್ಯನಾರಾಯಣ, ಶಿವಶಂಕರ್, ಗುಜ್ಜಲ್ ರಾಮಾಂಜಿನಿ, ಮದನ್ ಕುಮಾರ್, ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT