ಹೊಸಪೇಟೆ (ವಿಜಯನಗರ): ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಅವರಿಗೆ ಶುಭ ಕೋರುವ ಪತ್ರಗಳನ್ನು ಗುರುವಾರ ನಗರದಲ್ಲಿ ಅಂಚೆಗೆ ಹಾಕಿದರು.
ಬಿಜೆಪಿ ಮಹಿಳಾ ಮೋರ್ಚಾ, ಹಿಂದುಳಿದ ವರ್ಗಗಳ ಮೋರ್ಚಾ, ನಗರ ಘಟಕದ ಕಾರ್ಯಕರ್ತರು ಇದ್ದರು. ಎಲ್ಲರೂ ಪ್ರಧಾನಿ ಪತ್ರ ಬರೆದು, ಸಾಮೂಹಿಕವಾಗಿ ಪೋಸ್ಟ್ ಮಾಡಿದರು. ಇದಕ್ಕೂ ಮುನ್ನ ಎಲ್ಲರೂ ಪ್ರತಿಜ್ಞೆ ಸ್ವೀಕರಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅನಂತ ಪದ್ಮನಾಭ ಸ್ವಾಮಿ, ಪ್ರಧಾನ ಕಾರ್ಯದರ್ಶಿ ರಮೇಶ ನಾಯ್ಕ, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಕಾರ್ಯದರ್ಶಿ ಗೋವಿಂದರಾಜು, ಮುಖಂಡರಾದ ಕಾಸೆಟ್ಟಿ ಉಮಾಪತಿ, ಶಂಕರ್ ಮೇಟಿ, ಕೆ.ಎಸ್. ರಾಘವೇಂದ್ರ, ಕೆ.ಎಸ್. ಸತ್ಯನಾರಾಯಣ, ಭಾರತಿ ಬಸವನಗೌಡ ಪಾಟೀಲ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.