ಶುಕ್ರವಾರ, ಮಾರ್ಚ್ 31, 2023
33 °C

ಹಾವು ಕಡಿದು ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಹಾವು ಕಚ್ಚಿದ್ದರಿಂದ 11 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.

ತಾಲ್ಲೂಕಿನ ಗಾಳೆಮ್ಮನಗುಡಿಯ ಕೃಷ್ಣ ಮೃತ ಬಾಲಕ. ‘ಕೃಷ್ಣ ಭಾನುವಾರ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ. ಈ ವೇಳೆ ಹಾವು ಕಚ್ಚಿದ್ದರಿಂದ ಜೋರಾಗಿ ಕಿರುಚಿದ್ದಾನೆ. ತಕ್ಷಣವೇ ಪೋಷಕರು ಆತನನ್ನು ಗಮನಿಸಿ ಬಳಿ ಬಂದಿದ್ದಾರೆ. ಹಾವು ಕಚ್ಚಿರುವುದನ್ನು ತಿಳಿದು ಮಗನನ್ನು ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಕೊಪ್ಪಳದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೆ ತಡರಾತ್ರಿ ಕೃಷ್ಣ ಮೃತಪಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಹಂಪಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.