ಬುಧವಾರ, ಸೆಪ್ಟೆಂಬರ್ 22, 2021
21 °C

ಸಂಭ್ರಮದ ನಗರೇಶ್ವರ ಬ್ರಹ್ಮ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ತಾಲ್ಲೂಕಿನ ಕಮಲಾಪುರದಲ್ಲಿ ನಗರೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಮಂಗಳವಾರ ಸಂಜೆ ಶ್ರದ್ಧಾ, ಭಕ್ತಿ ಹಾಗೂ ಸಂಭ್ರಮದಿಂದ ನೆರವೇರಿತು.

ವಿವಿಧ ಕಡೆಗಳಿಂದ ಬಂದಿದ್ದ ನೂರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ಹೂ, ಬಾಳೆ, ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು. ಬೆಳಿಗ್ಗೆ ಹೋಮ, ಹವನ, ಮಡಿತೇರು ಕಾರ್ಯಕ್ರಮ ಜರುಗಿತು.

ಚೈತ್ರ ಕೃಷ್ಣ ತ್ರಯೋದಶಿಯಂದು ಆರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಕಲಶ ಸ್ಥಾಪನೆ, ಧ್ವಜಾರೋಹಣ, ನಂದಿ ಸ್ಥಾಪನೆ, ನಿತ್ಯ ಉಚ್ಚಾಯ ಉತ್ಸವ, ಪಾರ್ವತಿ ಪರಮೇಶ್ವರರ ಕಲ್ಯಾಣೋತ್ಸವ ನಡೆಯಿತು.

ಕಮಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಧಾರ್ಮಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.