ಗುರುವಾರ , ಜನವರಿ 21, 2021
18 °C

ಅಂಜನಾದ್ರಿಗೆ ಬಸ್‌ ಸಂಚಾರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಭಕ್ತರು, ಪ್ರವಾಸಿಗರ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯು ಇಲ್ಲಿನ ಕೇಂದ್ರ ಬಸ್‌ ನಿಲ್ದಾಣದಿಂದ ಗಂಗಾವತಿ ಸಮೀಪದ ಅಂಜನಾದ್ರಿಗೆ ಶನಿವಾರದಿಂದ ಬಸ್‌ ಸಂಚಾರ ಆರಂಭಿಸಿದೆ.

ಬೆಳಿಗ್ಗೆ 10 ಹಾಗೂ ಸಂಜೆ 4ಕ್ಕೆ ಬಸ್‌ ಪಯಣ ಬೆಳೆಸಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬಂದರೆ ಬಸ್‌ಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ತಿಳಿಸಿದ್ದಾರೆ.

ಹನುಮ ಭಕ್ತರು, ಪ್ರವಾಸಿಗರ ಅನುಕೂಲಕ್ಕಾಗಿ ಬಸ್‌ ವ್ಯವಸ್ಥೆ ಕಲ್ಪಿಸಬೇಕೆಂದು ಶ್ರೀರಾಮ ಸೇನೆಯ ಮುಖಂಡರು ಇತ್ತೀಚೆಗೆ ಮನವಿ ಪತ್ರ ಸಲ್ಲಿಸಿದ್ದರು.

ಶ್ರೀರಾಮ ಸೇನೆಯ ತಾಲ್ಲೂಕು ಅಧ್ಯಕ್ಷ ಜಗದೀಶ್ ಕಾಮಾಟಗಿ, ಕಾರ್ಯಾಧ್ಯಕ್ಷ ಅನೂಪ್ ಕುಮಾರ್, ಉಪಾಧ್ಯಕ್ಷ ಬಂಗಾರಿ ಸೂರಿ, ಟಿ.ಎಂ.ಮಂಜುನಾಥ ಶೆಟ್ಟಿ, ಅಭಿಷೇಕ್ ಸಿಂಗ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.