ಹೊಸಪೇಟೆ: ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲು

7

ಹೊಸಪೇಟೆ: ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲು

Published:
Updated:

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಕುರುಗೋಡು ಸಮೀಪ ಶುಕ್ರವಾರ ತುಂಗಭದ್ರಾ ಜಲಾಶಯದ ಕೆಳಮಟ್ಟದ ಕಾಲುವೆ ಒಡೆದು, ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಜಲಾಶಯದಿಂದ 1,200 ಕ್ಯುಸೆಕ್ ನೀರು ಕಾಲುವೆಗೆ ಹರಿಸಲಾಗುತ್ತಿತ್ತು. ಕಳೆದ ಮೂರು ತಿಂಗಳಿಂದ ನೀರು ಹರಿಸಲಾಗುತ್ತಿದ್ದು, ಕಾಲುವೆಯ ಗೋಡೆ ಶಿಥಿಲಗೊಂಡು ಒಡೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಲುವೆ ಒಡೆದಿರುವ ಪರಿಣಾಮ ನೀರು ಸಮೀಪದ ಗದ್ದೆಗಳಿಗೆ ನುಗ್ಗಿದೆ. ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

‘ಜಲಾಶಯದಿಂದ 45 ಕಿ.ಮೀ ದೂರದಲ್ಲಿ ಕಾಲುವೆ ಒಡೆದಿದೆ. ಕಾಲುವೆಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಕಾಲುವೆಯಿಂದ ನೀರು ಹರಿದು ಹೋಗಲು ಇನ್ನೂ ಒಂದು ಗಂಟೆ ಸಮಯ ಬೇಕಾಗುತ್ತದೆ. ನೀರು ಖಾಲಿಯಾದ ಬಳಿಕವಷ್ಟೇ ದುರಸ್ತಿ ಕೆಲಸ ಕೈಗೆತ್ತಿಕೊಳ್ಳಬಹುದು. ಅಲ್ಲಿಯವರೆಗೆ ಏನು ಮಾಡಲು ಸಾಧ್ಯವಿಲ್ಲ’ ಎಂದು ಎಂಜಿನಿಯರ್ ತಿಳಿಸಿದ್ದಾರೆ.

ಇತ್ತೀಚೆಗೆ ಕಂಪ್ಲಿ ಬಳಿ ಕಾಲುವೆಯ ಅಕ್ವಡಕ್ಟ್ (ಮೇಲುಗಾಲುವೆ) ಕೊಚ್ಚಿಕೊಂಡು ಹೋಗಿದ್ದರಿಂದ ಅಪಾರ ಬೆಳೆ ನಷ್ಟವಾಗಿತ್ತು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !