ದೇವದಾಸ್‌ ಪರ ಬಿರುಸಿನ ಪ್ರಚಾರ

ಬುಧವಾರ, ಮೇ 22, 2019
32 °C

ದೇವದಾಸ್‌ ಪರ ಬಿರುಸಿನ ಪ್ರಚಾರ

Published:
Updated:
Prajavani

ಹೊಸಪೇಟೆ: ಸೋಷಿಯಾಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಕಮ್ಯುನಿಸ್ಟ್‌) ಪಕ್ಷದ ಅಭ್ಯರ್ಥಿ ಎ. ದೇವದಾಸ್‌ ಪರ ಅವರ ಪಕ್ಷದ ಮುಖಂಡರು, ಕಾರ್ಯಕರ್ತರು ನಗರ ಹಾಗೂ ತಾಲ್ಲೂಕಿನಲ್ಲಿ ಗುರುವಾರ ಬಿರುಸಿನ ಪ್ರಚಾರ ಕೈಗೊಂಡರು.

ತಾಲ್ಲೂಕಿನ ರಾಮಸಾಗರ, ಬುಕ್ಕಸಾಗರ, ಕಮಲಾಪುರ, ಹಳೆ ಮಲಪನಗುಡಿಯ ಬಸ್‌ ನಿಲ್ದಾಣ, ತರಕಾರಿ ಮಾರುಕಟ್ಟೆ ಬಳಿ ಧ್ವನಿವರ್ಧಕದ ಮೂಲಕ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಿದರು. ನಂತರ ನಗರದ ಬಸ್‌ ನಿಲ್ದಾಣ, ತರಕಾರಿ ಮಾರುಕಟ್ಟೆ, ಕೃಷಿ ಉತ್ಪನ್ನ ಮಾರುಕಟ್ಟೆಗೆ ತೆರಳಿ, ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.

ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಆರ್‌. ಸೋಮಶೇಖರ್‌ ಮಾತನಾಡಿ, ‘ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಬಂಡವಾಳಷಾಹಿಗಳ ಪರವಾಗಿವೆ. ಮೇಲ್ನೊಟಕ್ಕೆ ಎರಡೂ ಪಕ್ಷಗಳ ಮುಖಂಡರು ಪರಸ್ಪರ ಕಿತ್ತಾಡುತ್ತಾರೆ. ಆದರೆ, ಇಬ್ಬರ ನಡುವೆ ಒಳ ಒಪ್ಪಂದವಿದೆ. ಬಿಜೆಪಿಯವರು ಮೇಲ್ವರ್ಗದವರನ್ನು ಮುಂದೆ ಮಾಡಿದರೆ, ಕಾಂಗ್ರೆಸ್‌ನವರು ಅಲ್ಪಸಂಖ್ಯಾತರು, ದಲಿತರ ಹೆಸರಿನಲ್ಲಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ನಮ್ಮ ಪಕ್ಷವು ಪ್ರಾಮಾಣಿಕ, ಹೋರಾಟಗಾರ ಎ. ದೇವದಾಸ್‌ ಅವರನ್ನು ಕಣಕ್ಕಿಳಿಸಿದೆ. ರೈತರು, ದಲಿತರು, ಭೂಮಿ ಕಳೆದುಕೊಂಡವರ ಪರವಾಗಿ ಹೋರಾಟ ನಡೆಸಿದವರು. 30 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಇದ್ದಾರೆ. ಅವರನ್ನು ಮತದಾರರು ಬೆಂಬಲಿಸಬೇಕು’ ಎಂದು ಕೋರಿದರು.

ಪಕ್ಷದ ಪ್ರಮುಖರಾದ ಗೋವಿಂದ, ಬಸಣ್ಣ, ಪಂಪಾಪತಿ, ಯರ್ರಿಸ್ವಾಮಿ, ಸುರೇಶ, ಪ್ರಶಾಂತ್‌ ಬಡಿಗೇರ್‌, ಮಂಜುಳಾ ಬಡಿಗೇರ್‌ ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !