ಶನಿವಾರ, ಜನವರಿ 18, 2020
20 °C

ಕರ್ತವ್ಯಕ್ಕೆ ಅಡ್ಡಿ; ಅರಸ್‌ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ನಗರಸಭೆ ಅಧಿಕಾರಿ ಹಾಗೂ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮುಖಂಡ ಕವಿರಾಜ್‌ ಅರಸ್‌ ವಿರುದ್ಧ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ಶುಕ್ರವಾರ ರಾತ್ರಿ ಪ್ರಕರಣ ದಾಖಲಾಗಿದೆ.

ನಗರಸಭೆ ಪರಿಸರ ಎಂಜಿನಿಯರ್‌ ಆರತಿ ಅವರು ಕೊಟ್ಟಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

‘ನಗರದ ಎ.ಪಿ.ಎಂ.ಸಿ. ವೃತ್ತದ ಬಳಿ ಕವಿರಾಜ್‌ ಅರಸ್‌ ಅವರು ಹೊಸ ವರ್ಷದ ಶುಭ ಕೋರುವ ಪ್ಲಾಸ್ಟಿಕ್‌ ಫ್ಲೆಕ್ಸ್‌ ಹಾಕಿದ್ದರು. ಪ್ಲಾಸ್ಟಿಕ್‌ ನಿಷೇಧವಿದ್ದರೂ ಅದನ್ನು ಹಾಕಿರುವ ವಿಷಯ ತಿಳಿದು ಆರತಿ ಹಾಗೂ ಸಿಬ್ಬಂದಿ ಅದನ್ನು ತೆರವುಗೊಳಿಸಲು ಜ.1ರಂದು ಅಲ್ಲಿಗೆ ಹೋಗಿದ್ದರು. ಈ ವೇಳೆ ಅರಸ್‌ ಅಲ್ಲಿಗೆ ಬಂದು, ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು