ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಾತಿ ಸಮಾವೇಶ, ಕಾಂಗ್ರೆಸ್‌ ಕುಂಟು ನೆಪ’

Last Updated 3 ಡಿಸೆಂಬರ್ 2019, 20:30 IST
ಅಕ್ಷರ ಗಾತ್ರ

ಹೊಸಪೇಟೆ: ‘ಎಲ್ಲಾ ಪಕ್ಷಗಳಂತೆ ನಾವೂ ಜಾತಿ ಸಮಾವೇಶ ಮಾಡಿದ್ದೇವೆ. ಅದರಲ್ಲಿ ತಪ್ಪೇನಿದೆ. ಕಾಂಗ್ರೆಸ್, ಬಿಜೆಪಿಯನ್ನು ಎದುರಿಸಲಾಗದೇ ಕುಂಟು ನೆಪಗಳನ್ನು ಹೇಳುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಾಂಗ್ರೆಸ್‌, ಜೆ.ಡಿ.ಎಸ್‌.ನವರು ಜಾತಿ ಆಧಾರದ ಮೇಲೆ ಸಮಾವೇಶಗಳನ್ನು ಮಾಡಿ, ಮತ ಕೇಳಿದ್ದಾರೆ. ನಾವು ಕೇಳಿದರೆ ತಪ್ಪಾಗುತ್ತದೆಯೇ’ ಎಂದು ಪ್ರಶ್ನಿಸಿದರು.

‘ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ಕೊಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಅಂದಹಾಗೆ, ವೀರಶೈವ ಲಿಂಗಾಯತ ಧರ್ಮೀಯರ ಸಭೆಯಲ್ಲಿ ಎಲ್ಲಾ ವರ್ಗದ ಮುಖಂಡರು ಪಾಲ್ಗೊಂಡಿದ್ದರು. ಹಾಗಾಗಿ ಅದು ಒಂದು ವರ್ಗಕ್ಕೆ ಸೀಮಿತವಾಗಿರಲಿಲ್ಲ’ ಎಂದು ಹೇಳಿದರು.

‘ವಿಜಯನಗರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾದ ನಂತರ ಮುಖ್ಯಮಂತ್ರಿ ಸೇರಿದಂತೆ ಒಟ್ಟು 26 ಮುಖಂಡರು ಕ್ಷೇತ್ರದಾದ್ಯಂತ ಪ್ರಚಾರ ನಡೆಸಿದ್ದಾರೆ. 247 ಮತಗಟ್ಟೆಗಳಲ್ಲಿ ನೇರವಾಗಿ ಜನರನ್ನು ಸಂಪರ್ಕಿಸಿ, ಸಂವಾದ ನಡೆಸಿದ್ದೇವೆ. ನಮ್ಮ ಪಕ್ಷದಲ್ಲಿ ಸಂಘಟನಾ ಕೌಶಲವಿದೆ. ಇದು ಬೇರೆ ಪಕ್ಷಗಳಲ್ಲಿ ಇಲ್ಲ. ಹಾಗಾಗಿ ಬಿಜೆಪಿ ಅಭ್ಯರ್ಥಿ ಆನಂದ್‌ ಸಿಂಗ್‌ ಅವರು 50 ಸಾವಿರ ಮತಗಳಿಂದ ಗೆಲ್ಲುವುದು ಖಚಿತ’ ಎಂದು ಭರವಸೆ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಮಂಡಲ ಅಧ್ಯಕ್ಷ ಅನಂತ ಪದ್ಮನಾಭ, ಮುಖಂಡರಾದ ಬಸವರಾಜ ಧಡೇಸಗೂರ, ಎಚ್‌. ಹನುಮಂತಪ್ಪ, ವೈ.ಯಮುನೇಶ್‌, ಶಂಕರ್‌ ಮೇಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT