ಖಾತೆ ಬದಲಿಸಿದರೆ ನನ್ನ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತದೆ: ಆನಂದ್ ಸಿಂಗ್

ಹೊಸಪೇಟೆ: ದೊಡ್ಡ ಖಾತೆ ಕೊಟ್ಟು ಸಣ್ಣ ಖಾತೆ ಕೊಟ್ಟರೆ ನನ್ನ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತದೆ. ಅದಕ್ಕೆ ನಾನು ಉತ್ತರಿಸುತ್ತ ಓಡಾಡಬೇಕಾಗುತ್ತದೆ ಎಂದು ಸಚಿವ ಆನಂದ್ ಸಿಂಗ್ ಅವರು ಖಾತೆ ಬದಲಿಸಿರುವುದಕ್ಕೆ ಪ್ರತಿಕ್ರಿಯಿಸಿದರು.
ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಕಟ್ಟಡ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿನಿಂದಲೂ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಹಾಗಾಗಿ ನನ್ನನ್ನು ಶಾಸಕನಾಗಿಸಿಯೇ ಇರಬೇಕು ಎಂದು ಹೇಳಿದರು.
ಸದ್ಯ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ಷೇತ್ರದಲ್ಲಿಯೇ ಇರುವೆ. ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರ ಪಾಲಿಸುತ್ತೇನೆ. ನಾಡಿದ್ದು ಭೇಟಿಯಾಗಲು ತಿಳಿಸಿದ್ದು, ಬೆಂಗಳೂರಿಗೆ ತೆರಳಿ ಭೇಟಿ ಮಾಡುವೆ ಎಂದರು.
ಮುಖ್ಯಮಂತ್ರಿಯವರಿಗೆ ಕೆಲ ತಾಂತ್ರಿಕ ಒತ್ತಡಗಳಿರಬಹುದು. ನನ್ನ ಹಲವು ಬೇಡಿಕೆಗಳನ್ನು ಈಡೇರಿಸಿದ್ದಾರೆ ಎಂದರು.
ಇದನ್ನೂ ಓದಿ.. ಮತ್ತೆ ಖಾತೆ ಅದಲು– ಬದಲು: ಸುಧಾಕರ್ಗೆ ವೈದ್ಯಕೀಯ; ಮಾಧುಸ್ವಾಮಿಗೆ ಪ್ರವಾಸೋದ್ಯಮ?
ವಿಜಯನಗರ ಜಿಲ್ಲೆ ಘೋಷಣೆಗೂ ಖಾತೆ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ಆಕ್ಷೇಪಣೆ ಸ್ವೀಕರಿಸಲಾಗಿದೆ. ಎಲ್ಲ ಪ್ರಕ್ರಿಯೆ ಮುಗಿದ ನಂತರ ಅಂತಿಮ ಅಧಿಸೂಚನೆ ಹೊರಬೀಳಬಹುದು ಎಂದರು.
ಆನಂದ್ ಸಿಂಗ್ ಅವರಿಗೆ ಈ ಮೊದಲು ಅರಣ್ಯ ಖಾತೆ ನೀಡಲಾಗಿತ್ತು. ಸಂಪುಟ ವಿಸ್ತರಣೆ ನಂತರ ಆ ಖಾತೆ ಅರವಿಂದ್ ಲಿಂಬಾವಳಿ ಅವರಿಗೆ ಕೊಟ್ಟು ಇವರಿಗೆ ಪ್ರವಾಸೋದ್ಯಮ ಖಾತೆಯನ್ನು ಸಿ.ಎಂ. ನೀಡಿದ್ದರು. ಈಗ ಪ್ರವಾಸೋದ್ಯಮ ಖಾತೆ ಬದಲಿಸಿ ಮೂಲಸೌಕರ್ಯ, ವಕ್ಫ್ ಮತ್ತು ಹಜ್ ಖಾತೆ ನೀಡಲಾಗಿದೆ.
ಆನಂದ್ ಸಿಂಗ್ ಭೇಟಿಯಾದ ರಾಜುಗೌಡ: ಖಾತೆ ಬದಲಾದ ಬೆನ್ನಲ್ಲೇ ಶಾಸಕ ರಾಜುಗೌಡ ಅವರು ಸಚಿವ ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.