ಶುಕ್ರವಾರ, ಜುಲೈ 30, 2021
26 °C

ಅಪ್ರಾಪ್ತೆಯೊಂದಿಗೆ 58ರ ವರನ ವಿವಾಹ ತಡೆದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಂಪ್ಲಿ (ಬಳ್ಳಾರಿ ಜಿಲ್ಲೆ) : ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಭಾನುವಾರ ತಡೆದಿದೆ.

58 ವರ್ಷದ ವ್ಯಕ್ತಿಯೊಂದಿಗೆ ಹಸೆಮಣೆ ಏರಬೇಕಿದ್ದ ಅಪ್ರಾಪ್ತೆ ಯನ್ನು ಅಧಿಕಾರಿಗಳು ರಕ್ಷಿಸಿ ಬಾಲ್ಯ ವಿವಾಹ ಕಾಯ್ದೆಯಡಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ಪ್ರಾಥಮಿಕ ಮಾಹಿತಿ ಪ್ರಕಾರ ವರನಿಗೆ ಇದು ಮೂರನೇ ವಿವಾಹ’ ಎಂದು ತಿಳಿದು ಬಂದಿರುವುದಾಗಿ ತಹಶೀಲ್ದಾರ್ ಗೌಸಿಯಾಬೇಗಂ ಮಾಹಿತಿ ನೀಡಿದರು.

‘ವರ, ಅಪ್ರಾಪ್ತೆಯ ತಂದೆ–ತಾಯಿ, ಮಧ್ಯಸ್ಥಿಕೆ ವಹಿಸಿದ್ದ ಮಹಿಳೆಯ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಪಿಎಸ್‍ಐ ವಿರುಪಾಕ್ಷಪ್ಪ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು