ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಕೃಷಿ ಕಾಯ್ದೆ ಹಿಂಪಡೆಯಲುರಾಷ್ಟ್ರಪತಿಗೆ ಸಿಐಟಿಯು ಹಕ್ಕೊತ್ತಾಯ

Last Updated 8 ಜನವರಿ 2021, 11:56 IST
ಅಕ್ಷರ ಗಾತ್ರ

ಹೊಸಪೇಟೆ: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ಕಾರ್ಯಕರ್ತರು ಶುಕ್ರವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು.

ಮೂರು ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ನವದೆಹಲಿಯಲ್ಲಿ 45 ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಮೈ ಕೊರೆಯುವ ಚಳಿ, ಮಳೆ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸದೇ ಇರುವುದು ಸರಿಯಲ್ಲ. ಇದು ರೈತ ವಿರೋಧಿ ಧೋರಣೆಯ ಪ್ರತೀಕ ಎಂದು ಮನವಿಯಲ್ಲಿ ಟೀಕಿಸಿದರು.

ಸಿಐಟಿಯು ರಾಜ್ಯ ಸಮಿತಿಯ ಕರೆಯ ಮೇರೆಗೆ ಜ. 1ರಿಂದ ರಾಜ್ಯದ ಹಲವೆಡೆ ನಿತ್ಯ ಪ್ರತಿಭಟನೆಗಳು ನಡೆಯುತ್ತಿವೆ. ಅದರ ಭಾಗವಾಗಿ ನಗರದಲ್ಲೂ ಪ್ರತಿಭಟಿಸಲಾಗಿದೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಬರುವ ದಿನಗಳಲ್ಲಿ ದೇಶದಾದ್ಯಂತ ಈ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ವಿದ್ಯುತ್‌ ತಿದ್ದುಪಡಿ ಮಸೂದೆ ತರಬಾರದು. ಹೊಸ ಶಿಕ್ಷಣ ನೀತಿ ಕೂಡ ಹಿಂಪಡೆಯಬೇಕು. ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಕೈಬಿಡಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಅಧ್ಯಕ್ಷ ಆರ್‌. ಭಾಸ್ಕರ್‌ ರೆಡ್ಡಿ, ತಾಲ್ಲೂಕು ಅಧ್ಯಕ್ಷೆ ಕೆ. ನಾಗರತ್ನಮ್ಮ, ಖಜಾಂಚಿ ಎನ್‌. ಯಲ್ಲಾಲಿಂಗ, ಕಾರ್ಯದರ್ಶಿ ಎಂ. ಗೋಪಾಲ, ರಾಜ್ಯ ದೇವದಾಸಿ ವಿಮೋಚನಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಮಾಳಮ್ಮ, ಮುಖಂಡರಾದ ಮರಡಿ ಜಂಬಯ್ಯ ನಾಯಕ, ಕೆ.ಎಂ. ಸಂತೋಷ್‌ ಕುಮಾರ್‌, ಕೆ.ಎಂ. ಸ್ವಪ್ನ, ಎಂ. ಸೋಮಯ್ಯ, ಹುಲುಗಪ್ಪ, ಅನಂತಶಯನ, ಜಿ. ಶಕುಂತಲಾ, ಎ. ಕರುಣಾನಿಧಿ, ಬೀಯಮ್ಮ, ರಾಮಾಂಜನೇಯಲು, ಯಶೋದಾ, ಸುಮಾ, ವಿಜಯಲಕ್ಷ್ಮಿ, ಮೋಹನ್‌ಕುಮಾರ್‌, ಎಸ್‌. ರಾಮ, ಮರಿಕಣಿವೆಪ್ಪ, ನಾಗರಾಜ, ತಿಪ್ಪೇಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT