ಗುರುವಾರ , ಏಪ್ರಿಲ್ 15, 2021
26 °C
ಹಗರಿಬೊಮ್ಮನಹಳ್ಳಿ: ಅತಿಕ್ರಮಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ

‘ಸ್ವಚ್ಛ ಪರಿಸರ; ಎಲ್ಲರ ಸಹಕಾರ ಅಗತ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಗರಿಬೊಮ್ಮನಹಳ್ಳಿ: ಪಟ್ಟಣವನ್ನು ಸ್ವಚ್ಛವಾಗಿಡಲು ಸಮುದಾಯದ ಸಹಕಾರವೂ ಅಗತ್ಯ ಎಂದು ಜೆಎಂಎಫ್‍ಸಿ ನ್ಯಾಯಾಲಯದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಹೇಳಿದರು.

ಪಟ್ಟಣದಲ್ಲಿ ಶನಿವಾರ ಮಹಾತ್ಮ ಗಾಂಧೀಜಿ ಹುತಾತ್ಮ ದಿನಾಚರಣೆ ಅಂಗವಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿವಿಧ ವಾರ್ಡ್‍ಗಳಲ್ಲಿ ಸ್ವಚ್ಛತೆ ಕೈಗೊಂಡು ಅವರು ಮಾತನಾಡಿದರು.

ಸಾರ್ವಜನಿಕರು ಎಲ್ಲೆಂದರಲ್ಲಿ ಕಸವನ್ನು ಚೆಲ್ಲಬಾರದು. ಕೇವಲ ಪುರಸಭೆ, ಗ್ರಾಮ ಪಂಚಾಯ್ತಿ ಸಿಬ್ಬಂದಿಗೆ ಮಾತ್ರ ಸ್ವಚ್ಛತೆಯ ಹೊಣೆಗಾರಿಕೆ ಇಲ್ಲ, ಪ್ರತಿಯೊಬ್ಬರೂ ಗ್ರಾಮ ಮತ್ತು ಪಟ್ಟಣವನ್ನು ಸ್ವಚ್ಛವಾಗಿಡಬೇಕು ಎಂದು ತಿಳಿಸಿದರು. ಪಟ್ಟಣದಲ್ಲಿ ಕೆಲವರು ಸರ್ಕಾರಿ ನಿವೇಶನವನ್ನು ಅತಿಕ್ರಮಣ ಮಾಡಿದ್ದಾರೆ, ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ. ಅದನ್ನು ಸರ್ವೆ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಳೇ ಬಸ್ ನಿಲ್ದಾಣದ ಬಳಿ ಅಂಗಡಿ ಮಾಲೀಕರು ಎಲ್ಲೆಂದರಲ್ಲಿ ಕಸ ಹಾಕಿರುವುದಕ್ಕೆ ದಂಡ ವಿಧಿಸಿದರು. ಕೆಲವರಿಗೆ ಎಚ್ಚರಿಕೆ ನೀಡಿದರು. ಮಾಲೀಕರಿಂದಲೇ ಕಸವನ್ನು ಸ್ವಚ್ಛಗೊಳಿಸಿದರು. ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಹಾಲಸಿದ್ದಪ್ಪ ಪೂಜೇರಿ, ವ್ಯವಸ್ಥಾಪಕ ಮಲ್ಲನಗೌಡ, ಪುರಸಭೆ ಮುಖ್ಯಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಇದ್ದರು.

ಇದೇ ಸಂದರ್ಭದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿ, ತಾಲ್ಲೂಕು ಪಂಚಾಯ್ತಿ , ಬಿಆರ್‌ಸಿ ಕಚೇರಿ, ಬೋವಿ ಕಾಲೋನಿ, ಹಳೇ ಬಸ್ ನಿಲ್ದಾಣದಲ್ಲಿ ಸ್ವಚ್ಛಗೊಳಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು