ಸೋಮವಾರ, ಡಿಸೆಂಬರ್ 9, 2019
17 °C

ನೀತಿ ಸಂಹಿತೆ: ಸಾಂಕೇತಿಕವಾಗಿ ವಾಲ್ಮೀಕಿ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಹೊಸಪೇಟೆ: ಜಿಲ್ಲೆಯಲ್ಲಿ ಲೋಕಸಭೆ ಉಪಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಇದೇ 24ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು. ಸಭೆ ಉದ್ದೇಶಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌, ‘ನ. 8ರ ವರೆಗೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. 24ರಂದು ತಾಲ್ಲೂಕು ಕಚೇರಿಯಲ್ಲಿ ಸರಳವಾಗಿ ಆಚರಿಸಲಾಗುವುದು. ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ನೀತಿ ಸಂಹಿತೆ ಅವಧಿ ಕೊನೆಗೊಂಡ ನಂತರ ವಾಲ್ಮೀಕಿ ನಾಯಕ ಸಮುದಾಯದವರು ವಿಜೃಂಭಣೆಯಿಂದ ಜಯಂತಿ ಆಚರಿಸಬಹುದು. ಅದಕ್ಕೆ ಅಗತ್ಯ ಸಹಕಾರ ನೀಡಲಾಗುವುದು’ ಎಂದು ತಿಳಿಸಿದರು.

‘ನೀತಿ ಸಂಹಿತೆಯಿಂದ ಅನಿವಾರ್ಯವಾಗಿ ಜಯಂತಿ ಆಚರಿಸುವುದು ಕೈಬಿಡಬೇಕಾಗಿದೆ. ಶೀಘ್ರದಲ್ಲೇ ಸಮಾಜದ ಮುಖಂಡರೊಂದಿಗೆ ಚರ್ಚಿಸಿ, ನೀತಿ ಸಂಹಿತೆ ಕೊನೆಗೊಂಡ ನಂತರ ಯಾವ ದಿನಾಂಕದಂದು ಜಯಂತಿ ಆಚರಿಸಬೇಕು ಎನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಾಲ್ಲೂಕು ವಾಲ್ಮೀಕಿ ನಾಯಕ ಸಮುದಾಯದ ಅಧ್ಯಕ್ಷ ಗುಜ್ಜಲ್‌ ಶಿವರಾಮಪ್ಪ ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೆಂಕೋಬಪ್ಪ, ತಹಶೀಲ್ದಾರ್‌ ಎಚ್‌. ವಿಶ್ವನಾಥ್‌, ವಾಲ್ಮೀಕಿ ನಾಯಕ ಸಮುದಾಯದ ಮುಖಂಡರಾದ ದುರುಗಪ್ಪ ಪೂಜಾರಿ, ಜಂಬಾನಹಳ್ಳಿ ಸತ್ಯನಾರಾಯಣ, ವೆಂಕಟೇಶ, ಬಿಸಾಟಿ ತಾಯಪ್ಪ ನಾಯಕ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು