ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೋದಿ, ಶಾ ಪಾಪ ಪಾಂಡು’

Last Updated 5 ಮೇ 2018, 14:11 IST
ಅಕ್ಷರ ಗಾತ್ರ

ಕಾಪು: ಮೋದಿ ಮತ್ತು ಶಾ ಅವರ ತಂತ್ರ ರಾಜ್ಯದಲ್ಲಿ ನಡೆಯಲ್ಲ. ದೇಶದ ಬೇರೆ ರಾಜ್ಯಗಳಿಗೂ ಕರ್ನಾಟಕಕ್ಕೂ ವ್ಯತ್ಯಾಸ ಇದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಶುಕ್ರವಾರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್ ಶಾ ಅವರ ಕನಸು ರಾಜ್ಯದಲ್ಲಿ ನನಸಾಗದು.  ಅವರು ಪಾಪಾ ಪಾಂಡು ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. 130ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಕರಾವಳಿಯಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬೆಂಬಲ ಇಲ್ಲ. ಅವರ ಕುಟಿಲ ತಂತ್ರ ಜನರಿಗೆ ಅರಿವಾಗಿದೆ. ಕರಾವಳಿಯಲ್ಲೂ ಮತದಾರರು ಕಾಂಗ್ರೆಸ್ ಪರ ಇದ್ದು, ಕರಾವಳಿ ಸುಳ್ಯ, ಕಾರ್ಕಳ ಸೇರಿ ಎಲ್ಲಾ 13 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಹಲವಾರು ಜನಪರ ಯೋಜನೆಗಳಿಂದಾಗಿ ಮತದಾರರು ಕಾಂಗ್ರೆಸ್‌ನತ್ತ ಒಲವು ತೋರಿದ್ದಾರೆ. ಇದರಿಂದಾಗಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದು ಪಕ್ಷದ ಆಂತರಿಕ ಸರ್ವೆಗಳಿಂದ ತಿಳಿದಿದೆ. ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರ ಸಿಗಲ್ಲ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ವಿರುದ್ದ ಮಾತನಾಡುವ ಮೋದಿ ಯಾಕೆ 2 ಕಡೆಗೆ ಸ್ಪರ್ಧೆ ಮಾಡಿದರು ಎಂಬದನ್ನು ಮೊದಲು ತಿಳಿಸಲಿ ಎಂದರು.

ಆಮೇಲೆ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಲಿ.  ಶ್ರೀರಾಮುಲು ಮತ್ತು ಕುಮಾರಸ್ವಾಮಿ ಅವರು ಎರಡು ಕಡೆಗಳಲ್ಲಿ ಸ್ಪರ್ಧೆ ಮಾಡಿದರೆ ತಪ್ಪಿಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ಲಾಕ್ ಅಧ್ಯಕ್ಷ ನವೀನ್ಚಂದ್ರ ಜೆ.ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಶಿವಾಜಿ ಸುವರ್ಣ, ಅಬ್ದುಲ್ ಅಝೀಝ್ ಹೆಜಮಾಡಿ, ಗುಲಾಂ ಮುಹಮ್ಮದ್, ದಿನೇಶ್ ಕೋಟ್ಯಾನ್, ಮೆಲ್ವಿನ್ ಡಿಸೋಜ, ನವೀನ್ ಎನ್.ಶೆಟ್ಟಿ, ಪ್ರಶಾಂತ್ ಜತ್ತನ್ನ, ಗುರುರಾಜ್ ಪೂಜಾರಿ, ಅಬ್ದುಲ್ ರಹ್ಮಾನ್, ಫಾರೂಕ್ ಚಂದ್ರನಗರ  ಇದ್ದರು.

ಸಂಸದೆಯಿಂದ ಅವಮಾನ

ಸಂಸದೆ ಶೋಭಾ ಕರಂದ್ಲಾಜೆ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಕೃಷ್ಣ ಮಠಕ್ಕೆ ಭೇಟಿ ನೀಡದೆ ಇರುವುದಕ್ಕೆ ಭಧ್ರತೆ ಕಾರಣ ನೀಡಿದ್ದಾರೆ. ಈ ಹೇಳಿಕೆ ಮೂಲಕ ಅವರು ಉಡುಪಿ ಜನತೆಯನ್ನು ಅದರಲ್ಲೂ ಕೃಷ್ಣ ಮಠವನ್ನು ಅವಮಾನಿಸಿದ್ದಾರೆ ಎಂದು ಐವನ್ ಡಿಸೋಜ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT