ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚೋದನಕಾರಿ ಭಾಷಣ: ಚಕ್ರವರ್ತಿ ಸೂಲಿಬೆಲೆ‌ ವಿರುದ್ಧ ಖಾಸಗಿ ದೂರು

Last Updated 20 ಏಪ್ರಿಲ್ 2019, 7:56 IST
ಅಕ್ಷರ ಗಾತ್ರ

ಬಳ್ಳಾರಿ: ನಗರದಲ್ಲಿ ಏ.14ರಂದು ಅಪರಾಧ ಕೃತ್ಯಕ್ಕೆ ಕುಮ್ಮಕ್ಕು ನೀಡುವಂಥ ಪ್ರಚೋದನಕಾರಿ ಭಾಷಣ ಮಾಡಿರುವ ಚಕ್ರವರ್ತಿ‌ ಸೂಲಿಬೆಲೆ‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ‌ಕೋರಿ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಬಚಾವ್ ಆಂದೋಲನ‌ ಸಂಘಟನೆಯು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ‌ನ್ಯಾಯಾಲಯದಲ್ಲಿ ಶನಿವಾರ ಖಾಸಗಿ ದೂರನ್ನು ದಾಖಲಿಸಿದೆ ಎಂದು ಸಂಘಟನೆಯ ಪ್ರಧಾನಕಾರ್ಯದರ್ಶಿ ಜಗದೀಶ್ ತಿಳಿಸಿದರು.

ನಗರದ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯ ಆವರಣದಲ್ಲಿ ಟೀಂ ಮೋದಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ‌ ಭಾಷಣ‌ ಮಾಡಿದ್ದ ಸೂಲಿಬೆಲೆ, ‘ರಾಹುಲ್ ಗಾಂಧಿಯನ್ನುಕೊಲ್ಲಬೇಕು ಅಂತ ಬಯಸುವ ಪುಣ್ಯಾತ್ಮ ಅದು ಯಾರಿದ್ದಾನಪ್ಪ ಅವರನ್ನು ಹುಡುಕಿಕೊಂಡು ಅವಾರ್ಡ್‌ ಕೊಡಬೇಕು ಎಂದು ಹೇಳಿದ್ದರು. ಈ ಹೇಳಿಕೆಯು ಹೀನಕೃತ್ಯಕ್ಕೆ ಕುಮ್ಮಕ್ಕು ನೀಡುವಂಥದ್ದು ಎಂದು ದೂರಿನಲ್ಲಿ ಪ್ರತಿಪಾದಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT