ಶನಿವಾರ, ಜನವರಿ 16, 2021
28 °C

ಕುಡುತಿನಿ: ದೂಳು, ಕಪ್ಪು ಹೊಗೆ ನಿಯಂತ್ರಿಸದ ಕಾರ್ಖಾನೆಗಳ ವಿರುದ್ಧ ಮುಷ್ಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೋರಣಗಲ್ಲು(ಬಳ್ಳಾರಿ ಜಿಲ್ಲೆ): ಇಲ್ಲಿಗೆ ಸಮೀಪದ ಕುಡುತಿನಿ ಪಟ್ಟಣದ ಸುತ್ತಲಿನ ಕೈಗಾರಿಕೆಗಳಿಂದ ಬರುವ ದೂಳು ಮತ್ತು ಕಪ್ಪು ಹೊಗೆಯನ್ನು ನಿಯಂತ್ರಿಸಬೇಕೆಂದು ಆಗ್ರಹಿಸಿ ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು,  ನಾಗರಿಕರು, ರೈತರು ಮತ್ತು ಪಟ್ಟಣದ ವಿವಿಧ ಸಂಘಟನೆಗಳ ಮುಖಂಡರು ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಡಿಸೆಂಬರಿನಲ್ಲಿ ಈ ಕುರಿತು ಗಮನ ಸೆಳೆದು ಕೈಗಾರಿಕೆಗಳ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ವಾಪಸ್ ಪಡೆಯಲಾಗಿತ್ತು. ಅಧಿಕಾರಿಗಳಿಗೆ ಸಾರ್ವಜನಿಕರು ಒಂದು ತಿಂಗಳ ಕಾಲ ಗಡುವು ನೀಡಿದ್ದರು. ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಶನಿವಾರ ಪಾದಯಾತ್ರೆ ಮತ್ತು ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ಹಮ್ಮಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು