ಭದ್ರತೆಗೆ ಆಗ್ರಹಿಸಿ ವಕೀಲರಿಂದ ಪ್ರತಿಭಟನೆ

7

ಭದ್ರತೆಗೆ ಆಗ್ರಹಿಸಿ ವಕೀಲರಿಂದ ಪ್ರತಿಭಟನೆ

Published:
Updated:
Deccan Herald

ಹೊಸಪೇಟೆ: ದಾಂಡೇಲಿಯಲ್ಲಿ ಇತ್ತೀಚೆಗೆ ನಡೆದ ವಕೀಲ ಅಜಿತ್‌ ನಾಯಕ ಅವರ ಕೊಲೆ ಖಂಡಿಸಿ ಬುಧವಾರ ಇಲ್ಲಿ ಪ್ರತಿಭಟನೆ ನಡೆಸಿದ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು, ರಾಜ್ಯದಲ್ಲಿನ ಎಲ್ಲ ವಕೀಲರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕೆಂದು ಆಗ್ರಹಿಸಿದರು.

ವಕೀಲರ ಸಂಘದ ಕಚೇರಿ ಎದುರು ಸೇರಿದ ವಕೀಲರು ನಾಯಕ ಕೊಲೆಯನ್ನು ಖಂಡಿಸಿದರು. ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದರು.

ಅಜಿತ್‌ ನಾಯಕ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ವೃತ್ತಿನಿರತ ವಕೀಲರಿಗೆ ಸರ್ಕಾರ ರಕ್ಷಣೆ ನೀಡಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ವಕೀಲರ ಸಂಘದ ಅಧ್ಯಕ್ಷ ಉಮೇಶ್‌, ಉಪಾಧ್ಯಕ್ಷ ವೀರನಗೌಡ, ವಕೀಲರಾದ ಕೆ. ಪ್ರಭಾಕರ್‌, ರವಿಕುಮಾರ ಇದ್ದರು.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !