ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತ್ತಿ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಸಾಂಕೇತಿಕ ಪ್ರತಿಭಟನೆ

Last Updated 29 ಏಪ್ರಿಲ್ 2021, 7:10 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಆಹಾರ ಖಾತೆ ಸಚಿವ ಉಮೇಶ ಕತ್ತಿ ಅವರ ಹೇಳಿಕೆ ಖಂಡಿಸಿ ಬ್ಲಾಕ್‌ ಯುವ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಕತ್ತಿ ಅವರ ಛಾಯಾಚಿತ್ರ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.

‘ವ್ಯಕ್ತಿಯೊಬ್ಬರು ಉಮೇಶ ಕತ್ತಿ ಅವರಿಗೆ ಕರೆ ಮಾಡಿ, ಪಡಿತರ ಕಡಿತ ಮಾಡಿರುವುದರಿಂದ ನಾವು ಇರಬೇಕಾ? ಸಾಯಬೇಕಾ? ಎಂದು ಪ್ರಶ್ನಿಸಿದ್ದಕ್ಕೆ, ಸಾಯುವುದೇ ಉತ್ತಮ ಎಂದು ಉದ್ಧಟತನದ ಹೇಳಿಕೆ ಕೊಟ್ಟಿದ್ದಾರೆ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು’ ಎಂದು ಬ್ಲಾಕ್‌ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸಿ.ಆರ್‌. ಭರತ್‌ ಕುಮಾರ್‌ ಒತ್ತಾಯಿಸಿದರು.

ಉಪಾಧ್ಯಕ್ಷೆ ಆಯಿಶಾ ಬೇಗಂ, ಕಾರ್ಯಕರ್ತರಾದ ಮೆಹಬೂಬ್ ಬಾಷ, ಚರಣ್, ಕೇಶವ, ದೇವರಾಜ, ಸುಭಾನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT