ಮಂಗಳವಾರ, ಅಕ್ಟೋಬರ್ 27, 2020
19 °C

ಹೊಸಪೇಟೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಕೇಂದ್ರ ಸರ್ಕಾರವು ರೈತ ವಿರೋಧಿ ಕೃಷಿ ಮಸೂದೆಗಳನ್ನು ತರಾತುರಿಯಲ್ಲಿ ಸಂಸತ್ತಿನ ಅನುಮೋದನೆ ಪಡೆದು ಜಾರಿಗೆ ತರಲು ಹೊರಟಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಇಲ್ಲಿನ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ರಾಷ್ಟ್ರಪತಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು. ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಮಾತನಾಡಿ, ‘ರಾಜ್ಯಸಭೆಯಲ್ಲಿ ಭೂಸ್ವಾಧೀನ, ಭೂಸುಧಾರಣೆ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಜಾರಿಗೆ ತರಲು ಹೊರಟಿದ್ದಾಗ ಅದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಬಳ್ಳಾರಿಯ ರಾಜ್ಯಸಭೆ ಸದಸ್ಯ ನಾಸೀರ್‌ ಹುಸೇನ್‌ ಸೇರಿದಂತೆ ಎಂಟು ಜನ ಸಂಸದರನ್ನು ಸಂಸತ್ತಿನಿಂದ ಅಮಾನತು ಮಾಡಿರುವುದು ದುರದೃಷ್ಟಕರ’ ಎಂದರು.

‘ಕೂಡಲೇ ಎಂಟು ಜನ ಸಂಸದರ ಅಮಾನತು ಆದೇಶ ಹಿಂಪಡೆಯಬೇಕು. ಕಾಯ್ದೆ ಜಾರಿಗೆ ತರುವುದಕ್ಕೂ ಮುನ್ನ ಅದರ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸದೇ ಇರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ಕ್ರಮ. ರಾಷ್ಟ್ರಪತಿ ಕೂಡಲೇ ಮಧ್ಯ ಪ್ರವೇಶಿಸಬೇಕು. ಯಾವುದೇ ಕಾರಣಕ್ಕೂ ಜನವಿರೋಧಿ ಮಸೂದೆಗಳಿಗೆ ಅಂಕಿತ ಹಾಕಬಾರದು’ ಎಂದು ಒತ್ತಾಯಿಸಿದರು.

ಕಮಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಸೋಮಪ್ಪ, ಮುಖಂಡರಾದ ಗುಜ್ಜಲ್ ನಾಗರಾಜ್, ನಿಂಬಗಲ್ ರಾಮಕೃಷ್ಣ, ವೀರಸ್ವಾಮಿ, ರಾಮನಗೌಡ, ಖದೀರ್, ಮಾರೆಪ್ಪ, ಯಂಕೋಬಣ್ಣ, ಬಿ. ಗಣೇಶ, ಮಂಜುನಾಥ, ಜಿ.ರಾಘವೇಂದ್ರ, ವಿಜಯಕುಮಾರ್, ಶ್ರೀನಿವಾಸ, ಸೋಮಪ್ಪ, ಮುನ್ನಿ ಕಾಸಿಂ, ರಜೀಯಾ ಬೇಗಂ, ಬಾನುಬೀ, ಶಮಾ, ತಾಜುದ್ದೀನ್, ಅಲಾನ್ ಭಕ್ಷಿ, ಆಜಾದ್, ಸಂತೋಷ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು