ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

7

ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

Published:
Updated:
Deccan Herald

ಹೊಸಪೇಟೆ: ಮೂರು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವು ಸಾಧಿಸಿದ್ದರಿಂದ ಪಕ್ಷದ ಕಾರ್ಯಕರ್ತರು ಮಂಗಳವಾರ ಸಂಜೆ ಇಲ್ಲಿನ ರೋಟರಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು.

ಪಕ್ಷದ ಧ್ವಜಗಳನ್ನು ಹಿಡಿದುಕೊಂಡು ಕಾಂಗ್ರೆಸ್‌ಗೆ ಜಯವಾಗಲಿ, ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡರು.

ನಂತರ ಮಾತನಾಡಿದ ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್‌ ರಾಮಕೃಷ್ಣ, ‘ಮಧ್ಯ ಪ್ರದೇಶ, ರಾಜಸ್ತಾನ್ ಮತ್ತು ಛತ್ತೀಸಗಡದಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಗೆಲುವು ಸಾಧಿಸಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ದೇಶದ ಜನ ಪಕ್ಷವನ್ನು ಬೆಂಬಲಿಸಿ, ಅಧಿಕಾರಕ್ಕೆ ತರುತ್ತಾರೆ ಎಂಬ ಭರವಸೆ ಇದೆ’ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿಯವರ ಜನವಿರೋಧಿ ನೀತಿಗಳಿಂದ ಬೇಸತ್ತಿರುವ ಜನ ಈ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಇಡೀ ದೇಶವನ್ನು ಕಾಂಗ್ರೆಸ್‌ ಮುಕ್ತ ಮಾಡುತ್ತೇನೆ ಎಂದು ಹೇಳುತ್ತಿದ್ದ ಮೋದಿ, ಅಮಿತ್‌ ಷಾಗೆ ದೇಶದ ಜನ ಉತ್ತರ ಕೊಟ್ಟಿದ್ದಾರೆ’ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಟಿಂಕರ್‌ ರಫೀಕ್‌ ಮಾತನಾಡಿ, ‘ಮೂರು ರಾಜ್ಯಗಳಲ್ಲಿ ಕಾಂಗ್ರೆಸ್‌ ಗೆದ್ದಿರುವುದರಿಂದ ಪಕ್ಷಕ್ಕೆ ಹೊಸ ಚೈತನ್ಯ ಬಂದಿದೆ. ಈ ಗೆಲುವಿನ ನಾಗಾಲೋಟ ಬರುವ ಲೋಕಸಭೆ ಚುನಾವಣೆಯಲ್ಲಿಯೂ ಮುಂದುವರಿಯಲಿದೆ’ ಎಂದು ಹೇಳಿದರು.

ಕಮಲಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಮಾಜಿ ಹೇಮಣ್ಣ, ಮುಖಂಡರಾದ ಸಂದೀಪ್‌ ಸಿಂಗ್‌, ವೆಂಕಟೇಶ, ಮಧುರಚೆನ್ನ ಶಾಸ್ತ್ರಿ, ಗುಜ್ಜಲ್‌ ನಾಗರಾಜ್‌, ತಾರಿಹಳ್ಳಿ ವೆಂಕಟೇಶ, ಗೌಸ್‌, ರವಿ, ಬಡಾವಲಿ, ಮುನ್ನಿ, ರಾಮು, ಚಂದ್ರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !