ಚಿಂತಕರ ಹಣಿಯಲು ‘ನಗರ ನಕ್ಸಲ’ರ ಪಟ್ಟ: ಪ್ರಶಾಂತ್‌ ಭೂಷಣ್‌

7

ಚಿಂತಕರ ಹಣಿಯಲು ‘ನಗರ ನಕ್ಸಲ’ರ ಪಟ್ಟ: ಪ್ರಶಾಂತ್‌ ಭೂಷಣ್‌

Published:
Updated:
Deccan Herald

ಹೊಸಪೇಟೆ: ‘ಆದಿವಾಸಿಗಳು, ದಲಿತರು ಹಾಗೂ ಶೋಷಿತರ ಏಳಿಗೆಗಾಗಿ ಶ್ರಮಿಸುತ್ತಿರುವವರಿಗೆ ‘ನಗರ ನಕ್ಸಲ’ರೆಂಬ ಹಣೆಪಟ್ಟಿ ಕಟ್ಟಿ ಅವರನ್ನು ಹಣಿಯುವ ಕೆಲಸ ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ’ ಎಂದು ಸುಪ್ರೀಂಕೋರ್ಟಿನ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಆರೋಪಿಸಿದರು.

ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶನಿವಾರ ಸಂಜೆ ನಡೆದ 12ನೇ ರಾಷ್ಟ್ರೀಯ ಸಮಾಜಶಾಸ್ತ್ರ ಸಮ್ಮೇಳನದ ಸಮಾರೋಪದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಪುಣೆ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಬಂಧಿಸಿರುವ ಚಿಂತಕರು, ಪ್ರಗತಿಪರರು 30 ವರ್ಷಗಳಿಂದ ದಮನಿತರ ಹಕ್ಕುಗಳಿಗೆ ಹೋರಾಟ ನಡೆಸುತ್ತಿದ್ದಾರೆ. ಅವರು ಕೇಂದ್ರ ಸರ್ಕಾರದ ಕೆಲವು ನೀತಿಗಳನ್ನು ವಿರೋಧಿಸಿದ್ದಾರೆ ಎಂಬ ಏಕೈಕ ಕಾರಣಕ್ಕೆ ಅವರ ಮೇಲೆ ಗುರುತರ ಆರೋಪ ಹೊರಿಸಿ, ಅವರ ದನಿ ಅಡಗಿಸುವ ಕೆಲಸ ಕೇಂದ್ರ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಅಪಾಯಕಾರಿ ಬೆಳವಣಿಗೆ’ ಎಂದು ಹೇಳಿದರು.

‘ಸಾಮಾಜಿಕ ಜಾಲತಾಣ ಮತ್ತು ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ವ್ಯವಸ್ಥಿತವಾಗಿ ಸುಳ್ಳು ಸುದ್ದಿಗಳನ್ನು ಹರಡಿ ವಾಸ್ತವವನ್ನು ಮುಚ್ಚಿಡುವ ಕೆಲಸ ಮಾಡಲಾಗುತ್ತಿದೆ. ಇದೆಲ್ಲ ಕೇಂದ್ರದ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ’ ಎಂದು ಆರೋಪ ಮಾಡಿದರು.

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !