ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಹಶೀಲ್ದಾರ್ ವಿರುದ್ಧ ಷಡ್ಯಂತ್ರ: ಖಂಡನೆ

ದೂರುದಾರರ ವಿರುದ್ಧ ತನಿಖೆ ಕೈಗೊಳ್ಳಲು ತಾಲ್ಲೂಕು ಪಂಚಾಯ್ತಿ ಸದಸ್ಯ ಆಗ್ರಹ
Last Updated 8 ಸೆಪ್ಟೆಂಬರ್ 2020, 2:20 IST
ಅಕ್ಷರ ಗಾತ್ರ

ಹೂವಿನಹಡಗಲಿ: ‘ದಲಿತ ಸಮುದಾಯಕ್ಕೆ ಸೇರಿದ ತಹಶೀಲ್ದಾರ್ ವಿಜಯಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ದೂರುದಾರರನ್ನೇ ತನಿಖೆಗೆ ಒಳಪಡಿಸಿ ಕ್ರಮ ಕೈಗೊಳ್ಳಬೇಕು’ ಎಂದು ತಾಲ್ಲೂಕು ಪಂಚಾಯ್ತಿ ಸದಸ್ಯ ಜೆ.ಶಿವರಾಜ್ ಒತ್ತಾಯಿಸಿದರು.

ತಹಶೀಲ್ದಾರ್ ಮೇಲೆ ಹೊರಿಸಿದ ಭ್ರಷ್ಟಾಚಾರ ಆರೋಪ ಖಂಡಿಸಿ ಮಾದಿಗ ಸಮಾಜ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಸೋಮವಾರ ತಹಶೀಲ್ದಾರ್ ವಿಶ್ವಜಿತ್ ಮೆಹತಾ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

‘ದೂರುದಾರ ಚಂದ್ರಶೇಖರ ದೊಡ್ಡಮನಿ ಮರಳು ಅಕ್ರಮ ಸೇರಿದಂತೆ ಹಲವು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಮರಳು ಅಕ್ರಮ ತಡೆಗಟ್ಟಲು ಪ್ರಯತ್ನಿಸಿದ ತಹಶೀಲ್ದಾರ್ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಮಾಹಿತಿ ಹಕ್ಕು ಕಾಯ್ದೆ ದುರುಪಯೋಗಪಡಿಸಿಕೊಂಡು ಅನೇಕ ಅಧಿಕಾರಿಗಳಿಗೆ ಕಿರುಕುಳ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಮೊದಲು ದೂರದಾರರ ವಿರುದ್ಧ ತನಿಖೆಗೆ ಆದೇಶಿಸಬೇಕು’ ಎಂದು ಅವರು ಆಗ್ರಹಿಸಿದರು.

ಮರಳು ಸಾಗಣೆದಾರ ಉಮೇಶನಾಯ್ಕ ಮಾತನಾಡಿ, ‘ಅಧಿಕ ಭಾರ ಹೇರಿದ್ದರಿಂದ ತಹಶೀಲ್ದಾರರು ಮರಳು ಸಮೇತ ತಮ್ಮ ಲಾರಿಯನ್ನು ವಶಕ್ಕೆ ಪಡೆದಿದ್ದರು. ಲಾರಿ ಬಿಡಲು ಲಂಚದ ಬೇಡಿಕೆ ಇಟ್ಟಿರಲಿಲ್ಲ’ ಎಂದು ಹೇಳಿದರು.

ಪುರಸಭೆ ಮಾಜಿ ಸದಸ್ಯ ಪಿ.ನಿಂಗಪ್ಪ, ದುರುಗೇಶ, ರವಿ, ಬಿ. ಆನಂದ, ಸೋಗಿ ನಾಗರಾಜ, ಅಂಜಿನಪ್ಪ ಕೊಳಚಿ, ಕೆ. ಸುರೇಶ, ಆನಂದ ಪೂಜಾರ್, ಮೈಲಪ್ಪ ಸೋವೇನಹಳ್ಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT