ಮಂಗಳವಾರ, ಫೆಬ್ರವರಿ 25, 2020
19 °C

ಕಾನ್‌ಸ್ಟೆಬಲ್‌ ಪತ್ನಿ ನೇಣಿಗೆ ಶರಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಮಾನಸಿಕ ಖಿನ್ನತೆಗೆ ಒಳಗಾಗಿ ಕಾನ್‌ಸ್ಟೆಬಲ್‌ ಚಂದ್ರಕಾಂತ ಅವರ ಪತ್ನಿ ರಾಧಮ್ಮ (36) ಇಲ್ಲಿನ ಆಜಾದ್‌ ನಗರದ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಬುಧವಾರ ಮಧ್ಯಾಹ್ನ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಪತಿ, ಗಂಡು ಹಾಗೂ ಹೆಣ್ಣು ಮಗಳಿದ್ದಾಳೆ. ‘ರಾಧಮ್ಮ ಥೈರಾಯ್ಡ್‌ ಸಮಸ್ಯೆಯಿಂದ ಬಳಲುತ್ತಿದ್ದರು. ಖಿನ್ನತೆಗೆ ಒಳಗಾಗಿ, ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಹಾಕಿಕೊಂಡು ಜೀವ ತ್ಯಜಿಸಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದರು. ಈ ಕುರಿತು ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)