ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ ನಿಲ್ದಾಣದಲ್ಲಿ ಕೊರೊನಾ ಜಾಗೃತಿ ಚಿತ್ರ

Last Updated 9 ಜೂನ್ 2021, 15:34 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ಸಾರ್ವಜನಿಕರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸಲು ಇಲ್ಲಿನ ಕೇಂದ್ರ ಬಸ್‌ ನಿಲ್ದಾಣದ ಗೋಡೆಗಳ ಮೇಲೆ ಚಿತ್ರ ಬಿಡಿಸಲಾಗುತ್ತಿದೆ.

ಲಾಕ್‌ಡೌನ್‌ನಿಂದ ಬಸ್‌ ಸಂಚಾರ ಸ್ಥಗಿತಗೊಂಡಿದೆ. ಇದೇ ಸಮಯ ಬಳಸಿಕೊಂಡು ಬಸ್‌ಗಳ ದುರಸ್ತಿ, ಅಳಿಸಿ ಹೋಗಿರುವ ನಾಮಫಲಕಗಳಿಗೆ ಹೊಸದಾಗಿ ಹೆಸರು ಬರೆಯಲಾಗುತ್ತಿದೆ. ಆವರಣವನ್ನು ಸ್ವಚ್ಛಗೊಳಿಸಲಾಗುತ್ತಿದೆ. ಬಸ್‌ ನಿಲ್ದಾಣ ಮತ್ತು ಡಿಪೊ ಕಚೇರಿ ನವೀಕರಣ ಮಾಡಲಾಗುತ್ತಿದೆ. ಇದರೊಂದಿಗೆ ಗೋಡೆಗಳ ಮೇಲೆ ಕೊರೊನಾ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಲು ಚಿತ್ರ ಬಿಡಿಸಲಾಗುತ್ತಿದೆ.

‘ಸಾರಿಗೆ ವ್ಯವಸ್ಥೆ ಆರಂಭಗೊಳ್ಳುವುದಕ್ಕೂ ಮುನ್ನ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆವರಣದ ಸ್ವಚ್ಛತೆ, ಬಸ್‌ಗಳ ದುರಸ್ತಿ ನಡೆಯುತ್ತಿದೆ. ಇಲಾಖೆಯ ಸಿಬ್ಬಂದಿಯೇ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಚಿತ್ರ ಬಿಡಿಸುತ್ತಿದ್ದಾರೆ’ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT